ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಟೊದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

Last Updated 29 ಡಿಸೆಂಬರ್ 2019, 14:59 IST
ಅಕ್ಷರ ಗಾತ್ರ

ಯಾದಗಿರಿ: ಚಲಿಸುತ್ತಿದ್ದ ಆಟೊದಲ್ಲೇ ಗರ್ಭಿಣಿ ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ತಾಲ್ಲೂಕಿನ ಮುದ್ನಾಳ ಗ್ರಾಮದ ನಿವಾಸಿ ದೇವಿಬಾಯಿ ಚಲಿಸುತ್ತಿದ್ದ ಅಟೊದಲ್ಲಿ ಮಗುವಿಗೆ ಜನ್ಮ ನೀಡಿದವರು. ಹೆರಿಗೆ ನೋವು ಕಾಣಿಸಿಕೊಂಡಾಗ ಮುದ್ನಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದೇವಿಬಾಯಿ ಅವರನ್ನು ಕರೆದೊಯ್ಯಲಾಗಿತ್ತು. ಆದರೆ, ಸೂಕ್ತ ದಾಖಲೆಗಳಿಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಅವರನ್ನು ದಾಖಲಿಸಿಕೊಳ್ಳಲು ನೀರಾಕರಿಸಿದ್ದಾರೆ.

ನಂತರ ಆಟೊದಲ್ಲಿ ಯಾದಗಿರಿ ಜಿಲ್ಲಾಸ್ಪತ್ರೆಗೆ ತೆರಳುತ್ತಿರುವಾಗ ಜಿಲ್ಲಾಸ್ಪತ್ರೆ ಸಮೀಪ ಹೆರಿಗೆ ಆಗಿದೆ. ಜೊತೆಯಿದ್ದ ಆಕೆಯ ನಾದಿನಿ ಅನೂಸುಯಾ ಹೆರಿಗೆ ವೇಳೆ ನೆರವಾಗಿದ್ದಾರೆ. ಸದ್ಯ ತಾಯಿ, ಮಗು ಆರೋಗ್ಯವಾಗಿದ್ದಾರೆ. ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT