ಮಂಗಳವಾರ, ಜನವರಿ 26, 2021
28 °C

ಚಿನ್ನದ ಅಂಗಡಿ ಮಾಲೀಕನ ಮನೆಯಲ್ಲೇ ಯುವಕನ ಕೊಲೆ, ಬೆಚ್ಚಿದ ಜನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಣಸಗಿ: ಪಟ್ಟಣದಲ್ಲಿ ಮಧ್ಯಾಹ್ನ ಚಿನ್ನದ ಅಂಗಡಿಯ ಮಾಲೀಕನ ಪುತ್ರನನ್ನು ಅವರ ಮನೆಯಲ್ಲಿಯೇ ಕೊಲೆ ಮಾಡಿದ ಘಟನೆ ಬುಧವಾರ ನಡೆದಿದೆ.

ಕೊಲೆಯಾದ ಯುವಕನನ್ನು ನರೇಂದ್ರ ಶಿರೂರಿ (22) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಮನೆಗೆ ಊಟಕ್ಕೆ ಬಂದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಪಟ್ಟಣ ಸೇರಿದಂತೆ ತಾಲ್ಲೂಕಿನೆಲ್ಲೆಡೆ ಜನ  ಭಯಭೀತರಾಗಿದ್ದು, ಜನ ತಂಡೋಪತಂಡವಾಗಿ ಕೊಲೆಯಾದ ಸ್ಥಳದತ್ತ ಆಗಮಿಸುತ್ತಿದ್ದರು.

‘ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕಿಶೋರ ಕಣ್ಮರೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಮೃತ ಯುವಕನ ತಂದೆ ಜಗದೀಶ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಯಾದಗಿರಿ ಎಸ್.ಪಿ ಋಷಿಕೇಶ ಭಗವಾನ್ ಸೋನವಣೆ, ಪ್ರೊಬೇಷನರಿ ಐಪಿಎಸ್ ಅಧಿಕಾರಿ ಶಿವಾಂಶು ರಜಪೂತ್, ಡಿವೈಎಸ್ಪಿ ವೆಂಕಟೇಶ ಉಗಿಬಂಡಿ, ಹುಣಸಗಿ ಸಿಪಿಐ ದೌಲತ್ ಎನ್.ಕೆ, ಪಿಎಸ್ಐ ಬಾಪುಗೌಡ ಪಾಟೀಲ, ಬಾಶುಮೀಯಾ ಕೊಂಚೂರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಪೊಲೀಸ್ ಶ್ವಾನದಳ ಆಗಮಿಸಿದ್ದರು.

ಆರೋಪಿ ಪತ್ತೆಗಾಗಿ ಪ್ರತ್ಯೇಕ 4 ತಂಡಗಳನ್ನು ರಚಿಸಿ ವ್ಯಾಪಕ ಜಾಲ ಬೀಸಲಾಗಿದೆ ಎಂದು ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು