ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಮಂದಿರ ಭಾರತೀಯರ ಹೆಮ್ಮೆ

Last Updated 5 ಆಗಸ್ಟ್ 2020, 15:58 IST
ಅಕ್ಷರ ಗಾತ್ರ

ಹುಣಸಗಿ: ‘ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರ ದೇವರ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಮೋದಿ ಅವರು ಚಾಲನೆ ನೀಡಿದ ಕ್ಷಣ ಪ್ರತಿಯೊಬ್ಬ ಭಾರತೀಯರು ಹೆಮ್ಮೆ ಪಡುವಂತಹದ್ದಾಗಿದೆ’ ಎಂದು ಶಾಸಕ ರಾಜೂಗೌಡ ಹೇಳಿದರು.

ತಾಲ್ಲೂಕಿನ ಕೊಡೇಕಲ್ಲ ಗ್ರಾಮದ ವಾಲ್ಮೀಕಿ ದೇವಸ್ಥಾನದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶ್ರೀರಾಮ ಹಾಗೂ ಮಹರ್ಷಿ ವಾಲ್ಮೀಕಿ ಅವರಿಗೆ ಪೂಜೆ ಸಲ್ಲಿಸಿ ಬಳಿಕ ಮಾತನಾಡಿದರು.

ಕೋಟ್ಯಂತರ ಭಾರತೀಯರ ಶ್ರದ್ಧೆ ಮತ್ತು ಭಕ್ತಿಯ ಸಂಕೇತವಾಗಿರುವ ಅಯೋಧ್ಯೆಯಲ್ಲಿ ದೇವಸ್ಥಾನ ನಿರ್ಮಾಣ ಕಾರ್ಯ ಆರಂಭಿಸಿರುವುದು ಶತಮಾನಗಳ ಇತಿಹಾಸವನ್ನು ತಿಳಿಸುವ ಕಾರ್ಯ ಆಗಿದೆ. ಇದು ಮುಂದಿನ ಪೀಳಿಗೆಗೆ ಆದರ್ಶವಾಗಲಿದ್ದು, ನಾವೆಲ್ಲರೂ ರಾಮನ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ದೇಶದ ಪ್ರತಿ ಹಳ್ಳಿಗಳಲ್ಲಿ, ಮನೆ ಮನಗಳಲ್ಲಿಯೂ ರಾಮನಾಮ ಜಪ ನಡೆದಿದ್ದು, ವಿಶ್ವವೇ ನಮ್ಮತ್ತ ನೋಡುವಂತಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಗುರುರಾಜ ಜೋಶಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಯಲ್ಲಪ್ಪ ಕುರಕುಂದಿ, ರಂಗನಾಥ ದೊರಿ, ಸೋಮನಿಂಗಪ್ಪ ದೊರಿ, ದೇವು ಗೋಪಾಳೆ, ಮಲ್ಲು ನವಲಗುಡ್ಡ, ಬಸಪ್ಪ ಪಂಜಗಲ್ಲ, ಮಹಮ್ಮದ ಖಾಜಿ, ಅಯ್ಯಪ್ಪ ಪಡಶೆಟ್ಟಿ, ಸುರೇಶ ದೇವೂರ, ಮಲ್ಲು ನವಲಗುಡ್ಡ, ಸಂಗಮೇಶ ಹೂಗಾರ, ರಾಜೂಗೌಡ ಸೇವಾಸಮಿತಿ ಸದಸ್ಯರು ಇದ್ದರು. ಬಸವರಾಜ ಭದ್ರಗೋಳ ನಿರೂಪಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT