ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಣದ ಬತ್ತಿ ಹಿಡಿದು ಮೆರವಣಿಗೆ

ಸರ್ವ ಸಂಘಟನೆಗಳ ಹೋರಾಟ ಸಮಿತಿ
Last Updated 5 ಅಕ್ಟೋಬರ್ 2020, 15:42 IST
ಅಕ್ಷರ ಗಾತ್ರ

ಯಾದಗಿರಿ: ಸರ್ವ ಸಂಘಟನೆಗಳ ಹೋರಾಟ ಸಮಿತಿ ವತಿಯಿಂದ ನಗರದ ತಹಶೀಲ್ದಾರ್‌ ಕಚೇರಿಯಿಂದ ಶಾಸ್ತ್ರಿ ವೃತ್ತ, ಸುಭಾಶ್ಚಂದ್ರ ಬೋಸ್‌ ವೃತ್ತದವರೆಗೆ ಮೇಣದ ಬತ್ತಿ ಮೆರವಣಿಗೆ ಸೋಮವಾರ ಸಂಜೆ ನಡೆಯಿತು.

ಉತ್ತರ ಪ್ರದೇಶದ ಹಾಥರಸ್‌ ಹಾಗೂ ಬಲರಾಮಪುರದಲ್ಲಿ ನಡೆದ ದಲಿತ ಯುವತಿಯರ ಮೇಲೆ ನಡೆದ ಅತ್ಯಾಚಾರ, ಕೊಲೆ ‍ಆರೋಪಿಗಳನ್ನು ಗಲ್ಲಿಗೇರಿಸಬೇಕು. ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸುಭಾಷ್ ವೃತ್ತದಲ್ಲಿ ಮೌನಾಚರಣೆ, ಮಾನವ ಸರಪಳಿ ರಚಿಸಿ ಆರೋಪಿಗಳ ವಿರುದ್ಧ ಘೋಷಣೆ ಕೂಗಿದರು.ಸುಭಾಷ ವೃತ್ತದಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಯಿತು.ನಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಗುರುಮಠಕಲ್ ಖಾಸಾ ಮಠದ ಶ್ರೀಗಳಾದ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ, ಹೆಡಗಿಮದ್ರಾದ ಶಾಂತಮಲ್ಲಿಕಾರ್ಜುನ ಶಿಚಾಚಾರ್ಯ ಸ್ವಾಮೀಜಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಈ ವೇಳೆ ಜಿಲ್ಲಾ ವಾಲ್ಮೀಕಿ ಸಮಾಜ ಜಿಲ್ಲಾಧ್ಯಕ್ಷ ಮರೆಪ್ಪ ನಾಯಕ, ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ, ದಲಿತ ಮುಖಂಡ ಮರೆಪ್ಪ ಚಟ್ಟಕರ್, ಕನ್ನಡ ಸ್ವಾಭಿಮಾನ ಸೇನೆ ಜಿಲ್ಲಾಧ್ಯಕ್ಷ ಭೀಮಾಶಂಕರ್ ಆಲ್ದಾಳ, ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಂದ್ರಶೇಖರ ದಾಸನಕೇರಿ, ಜೈ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಜಲ್ಲಪ್ಪನೋರ, ಕರ್ನಾಟಕ ಜನ ಸೇನೆ ಅಶೋಕ ಐಕೂರ್, ಭೀಮರಾಯ ಠಾಣಗುಂದಿ, ಶರಣಪ್ಪ ಜಾಕನಳ್ಳಿ, ಮೌಲಾಲಿ ಕಾಗೇರಿ, ಫಕಿರಪ್ಪ ಎಸ್. ನಾಯಕ, ಸಿದ್ಧಲಿಂಗಪ್ಪ ನಾಯಕ, ಮಲ್ಲು ಮಾಳಿಕೇರಿ, ನಾಗೇಂದ್ರ ರಾಯಚೂರಕರ, ಕಾಶಮ್ಮ, ಮಂಗಳಮುಖಿ ಅಧ್ಯಕ್ಷ ಸೋನು ಸೇರಿದಂತೆ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT