ಶನಿವಾರ, ಅಕ್ಟೋಬರ್ 24, 2020
18 °C
ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ

‘ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅಪಾರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುರುಮಠಕಲ್: ದೇಶದ ಅಭಿವೃದ್ಧಿಗೆ ಎಲ್ಲಾ ವರ್ಗಗಳೂ ಒಗ್ಗೂಡಿ ಶ್ರಮಿಸುವ ಅವಶ್ಯಕತೆ ಇದೆ, ಅಂತೆಯೇ ಎಲ್ಲರ ಪರಿಶ್ರಮದಿಂದ ದೇಶ ಸುಭದ್ರವಾಗಿರಲು ಸಾಧ್ಯ. ಅದರಂತೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜೊತೆಗೆ ಮಾರ್ಗದರ್ಶನ ನೀಡಿ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಶಿಕ್ಷಕರ ಪಾತ್ರ ಇನ್ನೂ ಹೆಚ್ಚಿನ ಮಹತ್ವ ಪಡೆದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾಂತರೆಡ್ಡಿ ಗುನ್ನಿ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಆಯೋಜಿಸಿದ್ದ 2020-21ನೇ ಸಾಲಿನ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಗುವಿನ ಭವಿಷ್ಯದ ಕುರಿತು ಹೆತ್ತವರು ಚಿಂತಿಸಿದಂತೆ ಶಿಕ್ಷಕರೂ ತಮ್ಮ ವಿದ್ಯಾರ್ಥಿ ಉತ್ತಮ ಸ್ಥಾನಮಾನವನ್ನು ಪಡೆದು ಗಣ್ಯನಾಗಬೇಕು ಎಂದು ಬಯಸುತ್ತಾರೆ. ದೇಶದ ಸುಭದ್ರತೆ ಹಾಗೂ ಅಭಿವೃದ್ಧಿಯಲ್ಲಿ ರೈತ, ಸೈನಿಕ ಹಾಗೂ ಶಿಕ್ಷಕರ ಪಾತ್ರ ಬಹು ಅಮೂಲ್ಯವಾಗಿದ್ದು ಎಂದರು.

ನಿರಂತರ ಕ್ರಿಯಾಶೀಲತೆಯ ಮೂಲಕ ನಮ್ಮನ್ನು ನಾವು ತೊಡಗಿಸಿಕೊಂಡರೆ ದೇಹ ಮತ್ತು ಮನಸ್ಸಿನ ಆರೋಗ್ಯ ಉತ್ತಮವಾಗಿರುತ್ತದೆ. ಶಿಕ್ಷಕರು ಕ್ರಿಯಾಶೀಲರಾಗುವ ಮೂಲಕ ಮಕ್ಕಳಿಗೆ ಮಾದರಿಯಾಗಬೇಕು ಎಂದು ಕಿವಿಮಾತು ಹೇಳಿದರು.

ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಸಂತೋಷಕುಮಾರ ನಿರೇಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಖಾಸಾಮಠದ ಶಾಂತವೀರ ಗುರು ಮುರುಘರಾಜೇಂದ್ರ ಶ್ರೀಗಳು ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಸಾಧಕ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ತಾಲ್ಲೂಕು ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಸವರಾಜ ಶರಭೈ, ಶಿಕ್ಷಣ ಸಂಯೋಜಕ ಶಿವರಾಜ ಸಾಕಾ, ಬಿಆರ್‌ಪಿ ಶಶಿಕಾಂತ ಜನಾರ್ಧನ, ಸಿಆರ್‌ಪಿ ನಾರಾಯಣರೆಡ್ಡಿ, ವಿನೋದಕುಮಾರ ಪಾಂಚಾಳ, ಕಿಷ್ಟಾರೆಡ್ಡಿ, ಲಕ್ಷ್ಮಿಕಾಂತರೆಡ್ಡಿ, ಭೀಮಪ್ಪ, ಮಲ್ಲಯ್ಯ, ಮಲ್ಲಿಕಾರ್ಜುನ ಹೊಸಮನಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು