ಮಂಗಳವಾರ, ಏಪ್ರಿಲ್ 13, 2021
32 °C

ಪ್ರೇಮಿಗಳಿಗೆ ಪೋಷಕರಿಂದ ಬೆದರಿಕೆ: ಎಸ್ಪಿಗೆ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಪೋಷಕರು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಪ್ರೇಮಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. 

ನಗರದ ಬಸವೇಶ್ವರಿ (21) ಹಾಗೂ ಸಂದೇಶ (23) ಪ್ರೀತಿಸಿ ವಿವಾಹ ಆಗಿದ್ದ ಜೋಡಿ.

ಕಳೆದ ಮೇ 18 ರಂದು ವಿವಾಹ ನೋಂದಣಿ ಕಚೇರಿಯಲ್ಲಿ ಕಾನೂನಿನ ಪ್ರಕಾರ ಮದುವೆ ಆಗಿದ್ದಾರೆ. ಅಂತರ ಜಾತಿಯ ವಿವಾಹ ಆಗಿದ್ದರಿಂದ ಹುಡುಗಿಯ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಿತ್ಯ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ಇದರಿಂದ ನೆಮ್ಮದಿ ಇಲ್ಲದಂತಾಗಿದೆ. ಜೀವ ಭಯ ಕಾಡುತ್ತಿದೆ ಎಂದು ಎಸ್ಪಿ ಋಷಿಕೇಶ್ ಭಗವಾನ್ ಗೆ ದೂರು ಸಲ್ಲಿಸಿದ್ದಾರೆ. ಅಲ್ಲದೆ ಬೆದರಿಕೆ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಎಸ್ಪಿ ಋಷಕೇಶ್ ಭಗವಾನ್ ಮಾತನಾಡಿ, ಕಾನೂನಿ‌ನ ಪ್ರಕಾರ ವಿವಾಹ ಆಗಿದ್ದ ಜೋಡಿಗಳಿಗೆ ರಕ್ಷಣೆ ಕೊಡುವುದಾಗಿ ಭರವಸೆ ನೀಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು