ಭಾನುವಾರ, ಏಪ್ರಿಲ್ 11, 2021
26 °C

ಯಾದಗಿರಿಯಲ್ಲಿ ಗುಡುಗು ಸಹಿತ ಜೋರು ಮಳೆ: ಅಪಾರ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸೋಮವಾರ ಸಂಜೆ ಬಿರುಗಾಳಿ ಸಹಿತ ಭಾರಿ ಮಳೆಯಾಯಿತು. ಯರಗೋಳ ಸಮೀಪದ ಅಲ್ಲಿಪುರ ಗ್ರಾಮದಲ್ಲಿ ಸಿಡಿಲು ಬಡಿದು ಆಕಳು ಸಾವನ್ನಪ್ಪಿದೆ. ಭತ್ತದ ತೆನೆಗಳು ನೆಲ ಕಚ್ಚಿವೆ.

ನಗರದ ಸುಭಾಷ ವೃತ್ತದ ಉಳ್ಳೆಸೂಗುರ ಕಾಂಪ್ಲೆಕ್ಸ್‌ ಬಳಿ ನಿರ್ಮಾಣ ಹಂತದ ಗೋಡೆ ಕುಸಿದ ಪರಿಣಾಮ 8 ಬೈಕ್‌ಗಳು ಜಖಂಗೊಂಡಿವೆ. ಬೀದಿ ಬದಿ ಹೂ–ಹಣ್ಣು ಮತ್ತು ತರಕಾರಿ ವ್ಯಾಪಾರಸ್ಥರಿಗೆ ತೊಂದರೆಯಾಯಿತು. 

ಖಾನಾಪುರ–ಯಾದಗಿರಿ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಮರ ಉರುಳಿಬಿದ್ದಿದ್ದರಿಂದ ಕೆಲ ಹೊತ್ತು ಸಂಚಾರ ಸ್ಥಗಿತಗೊಂಡಿತ್ತು.

ನಗರದ ಎಪಿಎಂಸಿ ಆವರಣದಲ್ಲಿ ಮಾರಾಟಕ್ಕೆ ತರಲಾಗಿದ್ದ ಶೇಂಗಾ, ಮಳೆಯಿಂದ ನೀರು ಪಾಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು