ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆರೋಗ್ಯಕರ ಜೀವನಕ್ಕೆ ಶೌಚಾಲಯ ಅಗತ್ಯ’

Last Updated 18 ಜುಲೈ 2019, 5:55 IST
ಅಕ್ಷರ ಗಾತ್ರ

ಯಾದಗಿರಿ: ಆರೋಗ್ಯಕರ ಜೀವನ ನಡೆಸಲು ಶೌಚಾಲಯಗಳು ಅತ್ಯಾವಷ್ಯಕವಾಗಿವೆ. ನಮ್ಮ ಸುತ್ತಮುತ್ತಲಿನ ಪರಿಸರ ಶುಚಿಯಾಗಿದ್ದರೆ ಪ್ರತಿಯೊಬ್ಬರು ಆರೋಗ್ಯದಿಂದ ಜೀವನ ನಡೆಸಲು ಸಾಧ್ಯ’ ಎಂದು ಪೌರಾಯುಕ್ತ ರಮೇಶ ಸುಣಗಾರ ಹೇಳಿದರು.

ಇಲ್ಲಿನ ವಾಲ್ಮೀಕಿ ನಗರದ ಕಮಲಾ ನೆಹರು ಪಾರ್ಕ್‌ ಹತ್ತಿರ ನಗರೋತ್ಥಾನ ಯೋಜನೆಯ ಮೂರನೇ ಹಂತದ ಅನುದಾನದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಶೌಚಾಲಯ ಇಲ್ಲದ ಪ್ರತಿಯೊಬ್ಬರು ಸಾರ್ವಜನಿಕ ಶೌಚಾಲಯಗಳನ್ನು ಬಳಸಬೇಕು. ಆ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು’ ಎಂದರು.

‘ಬಯಲಲ್ಲಿ ಶೌಚ ಮಾಡುವುದರಿಂದ ಪರಿಸರ ಮಾಲಿನ್ಯ ಉಂಟಾಗಿವಿವಿಧ ರೋಗಗಳು ಹರಡುತ್ತವೆ. ಹಾಗಾಗಿ ಸಾರ್ವಜನಿಕರು ಶೌಚಾಲಯ ನಿರ್ಮಿಸಿಕೊಳ್ಳಲು ಸರ್ಕಾರ ಹಲವು ಯೋಜನೆಗಳು ಜಾರಿಗೊಳಿಸಿದೆ. ಅವುಗಳನ್ನು ಬಳಸಿಕೊಳ್ಳಬೇಕು. ಆ ಮೂಲಕ ಉತ್ತಮ ಪರಿಸರ ನಿರ್ಮಿಸಿಕೊಳ್ಳಬೇಕು’ ಎಂದರು.

ನಗರಸಭೆ ಸದಸ್ಯರಾದ ಹಣಮಂತ ನಾಯಕ, ನಿರ್ಮಲಾ ಜಗನ್ನಾಥ, ಅವಿನಾಶ, ಸಿದ್ದಯ್ಯ ಸ್ವಾಮಿ ಹಿರೇಮಠ, ಬಾಲರಾಜ್‌, ಶಿವರಾಜ ಸುಂದಳ್ಳಿ, ಹಣಮಂತ ಹೊಸಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT