ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಂಚಾರ ನಿಯಮ ಪಾಲನೆ ಕಡ್ಡಾಯ’

ಶಹಾಪುರ; ಆಟೊಗಳಿಗೆ ಎಸ್‌ಎಚ್‌ಪಿ ಕೋಡ್ ಹಂಚಿಕೆ
Last Updated 23 ಸೆಪ್ಟೆಂಬರ್ 2021, 16:20 IST
ಅಕ್ಷರ ಗಾತ್ರ

ಶಹಾಪುರ: ಆಟೊಗಳಿಗೆ ಎಸ್‌ಎಚ್‌ಪಿ ಕೋಡ್ ಹಂಚಿಕೆ ಮಾಡಲಾಗಿದ್ದು, ಅದನ್ನು ಆಟೊನ ಹಿಂಭಾಗ, ಮುಂಭಾಗ ಮತ್ತು ಪ್ರಯಾಣಿಕರು ಹತ್ತುವ ಜಾಗದಲ್ಲಿ ಅಂಟಿಸಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ನಮೂದಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದರು.

ನಗರದ ಪೊಲೀಸ್ ಠಾಣೆಯಲ್ಲಿ ಗುರುವಾರ ಆಟೊ ಚಾಲಕರ ಸಭೆ ಹಾಗೂ ಸಂಚಾರಿ ನಿಯಮಗಳ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಗರದಲ್ಲಿ ಈಚೆಗೆ ಎರಡು ಘಟನೆಗಳಲ್ಲಿ ಕೆಲ ಆಟೊ ಚಾಲಕರು ಭಾಗಿಯಾಗಿದ್ದರು. ಮುಂದಿನ ದಿನಗಳಲ್ಲಿ ಇಂತಹ ಕಹಿ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ನಗರದಲ್ಲಿ ಅಗತ್ಯ ದಾಖಲೆ ಹೊಂದಿದ ಸುಮಾರು 90 ಆಟೊಗಳಿಗೆ ಅನುಕ್ರಮವಾಗಿ ಸಂಖ್ಯೆ ನೀಡಲಾಗಿದೆ. ಎಲ್ಲಾ ಚಾಲಕರು ಅಗತ್ಯ ದಾಖಲೆಗಳನ್ನು ಹಾಜರುಪಡೆಯಿಸಿ ಸಂಖ್ಯೆ ಪಡೆಯಬೇಕು. ರಾತ್ರಿ ವೇಳೆ ಚಾಲನೆಗೆ ಮುಂದಾಗುವವರು ಕಡ್ಡಾಯವಾಗಿ ರಾತ್ರಿ 10 ಗಂಟೆಗೆ ಠಾಣೆಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಈ ಪೊಲೀಸ್ ಸಹಾಯವಾಣಿ ಸಂಖ್ಯೆಯನ್ನು ನಮೂದಿಸಲಾಗಿದೆ. ಮುಂದಿನ ದಿನಗಳಲ್ಲಿ ಆಟೊ ಚಾಲಕರ ವೈಯಕ್ತಿಕ ವಿವರಗಳನ್ನು ಅಳವಡಿಸಲಾಗುವುದು ಎಂದರು.

ಆಟೊ ಚಾಲಕರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ಜಿಲ್ಲೆಯಲ್ಲಿ 9 ಲಕ್ಷ ಜನರು ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದಾರೆ. ಇಲ್ಲಿಯವರೆಗೆ 7ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ಇನ್ನೂ 2 ಲಕ್ಷ ಜನರು ಮುಂದೆ ಲಸಿಕೆ ಹಾಕಿಸಿಕೊಳ್ಳಬೇಕು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಐಎಸ್ ಹಾಗೂ ಐಪಿಎಸ್ ಪರೀಕ್ಷೆ ತೆಗೆದುಕೊಳ್ಳಲು ಇಚ್ಛಿಸುವವರಿಗೆ ಉಚಿತ ತರಬೇತಿ ನೀಡಲಾಗುವುದು ಎಂದರು.

ಶಹಾಪುರ ಠಾಣೆಯ ಇನ್‌ಸ್ಪೆಕ್ಟರ್ ಚೆನ್ನಯ್ಯ ಹಿರೇಮಠ ಮಾತನಾಡಿ, ಆಟೊ ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ಸಂಚಾರಿ ನಿಯಮದ ಪ್ರಕಾರ ಪ್ರಯಾಣಿಕರನ್ನು ಕರೆದುಕೊಂಡು ಹೋಗಬೇಕು. ಚಾಲನಾ ಪರವಾನಿಗೆ ಪತ್ರ, ವಿಮೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಎಂದರು.

ಈ ವೇಳೆ ಚಾಲಕರಿಗೆ ಸಸಿ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT