ಗುರುಸುಣಿಗಿ ಗ್ರಾಮದ ಕ್ರಾಸ್ ಹತ್ತಿರ ಬ್ಯಾರಿಕೇಡ್ ಹಾಕಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಯಾದಗಿರಿ ನಗರದ ಸಮೀಪದಲ್ಲಿ ರೈಲ್ವೆ ಸೇತುವೆಯ ಹತ್ತಿರ ಭೂ ಕುಸಿತ ಹಾಗೂ ಭೀಮಾ ನದಿಯ ಹಳೆಯ ಸೇತುವ ಮೇಲೆ ಇರುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿರುವುದರಿಂದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ಕ್ರಮವನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ