ಬುಧವಾರ, ಮೇ 18, 2022
23 °C
ರಸ್ತೆ ಸುರಕ್ಷತಾ ಕಾರ್ಯಕ್ರಮ: ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ ಹೇಳಿಕೆ

ಸಂಚಾರ ನಿಯಮ ಪಾಲನೆ ಕಡ್ಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಹಾಪುರ: ‘ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದ ಕಾರಣ ಅಪಘಾತಗಳು ಹೆಚ್ಚುತ್ತಿವೆ. ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಮಾನವೀಯತೆ ದೃಷ್ಟಿಯಿಂದ ಅಪಘಾತಕ್ಕೆ ಒಳಗಾದವರನ್ನು ರಕ್ಷಿಸಲು ಸಹಾಯ ಮಾಡಬೇಕು’ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಅಪಘಾತಗಳು ಹೇಳಿ–ಕೇಳಿ ಬರುವುದಿಲ್ಲ. ಸಾರಿಗೆ ಇಲಾಖೆ ರೂಪಿಸಿರುವ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಸೀಟ್‌ಬೆಲ್ಟ್‌, ಹೆಲ್ಮೆಟ್‌ ಧರಿಸಬೇಕು. ದ್ವಿಚಕ್ರ ವಾಹನದಲ್ಲಿ ಇಬ್ಬರಿಗಿಂತ ಹೆಚ್ಚು ಜನ ಪ್ರಯಾಣಿಸಬಾರದು. ಅನಾವಶ್ಯಕವಾಗಿ ಇತರ ವಾಹನಗಳನ್ನು ಹಿಂದಿಕ್ಕುವ ಪ್ರಯತ್ನ ಮಾಡಬೇಡಿ’ ಎಂದು ಸಲಹೆ ನೀಡಿದರು.

‘ಹೊಸ ಕಾಯ್ದೆಯಂತೆ ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ₹10 ಸಾವಿರ ದಂಡ ವಿಧಿಸಲಾಗುತ್ತದೆ. ವಾಹನ ಚಲಾಯಿಸುವಾಗ ಮೊಬೈಲ್ ಬಳಸುವುದು ಅಪಾಯಕಾರಿ. ಏಕಾಗ್ರತೆ ಕಳೆದುಕೊಳ್ಳುವುದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚು. ಪರವಾನಗೆ ಹಾಗೂ ವಿಮೆ ಮಾಡಿಸುವುದು ಕಡ್ಡಾಯ’ ಎಂದರು.

ಕಾಲೇಜಿನ ಪ್ರಾಚಾರ್ಯ ಪ್ರೊ.ಚೆನ್ನಾರಡ್ಡಿ ತಂಗಡಗಿ, ತಹಶೀಲ್ದಾರ್ ಜಗನಾಥರೆಡ್ಡಿ, ಪಿಎಸ್ಐ ಚಂದ್ರಕಾಂತ ಮೆಕಾಲೆ, ಮೋಟಾರ್ ವಾಹನ ನಿರೀಕ್ಷಕ ವೆಂಕಟಪ್ಪ ಕಲಾಲ್, ಆನಂದ ಕುಮಾರ ಜೋಷಿ, ಡಾ.ಶರಣಪ್ಪ ಸಂಘರ್ಷ, ರಾಮಕೃಷ್ಣ ಮಿರ್ಜಿ, ಶರಣು ಕುಮಾರ ಹಾಗೂ ಕಾಳಮ್ಮ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು