ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಪದಾಧಿಕಾರಿಗಳಿಂದ ವಿಜಯೋತ್ಸವ

ವಿಧಾನಸಭೆ ಉಪಚುನಾವಣೆ ಜಯಭೇರಿ
Last Updated 11 ಡಿಸೆಂಬರ್ 2019, 9:57 IST
ಅಕ್ಷರ ಗಾತ್ರ

ಯಾದಗಿರಿ: ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದಕ್ಕೆ ಜಿಲ್ಲಾ ಬಿಜೆಪಿ ಘಟಕದ ಪದಾಧಿಕಾರಿಗಳು ನಗರದ ಸುಭಾಷ್‌ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಈ ವೇಳೆ ಪಕ್ಷದ ರಾಜ್ಯ ಉಪಾಧ್ಯಕ್ಷೆ ನಾಗರತ್ನ ಕುಪ್ಪಿ ಮಾತನಾಡಿ, ‘ರಾಜ್ಯದಲ್ಲಿ ಸ್ಥಿರ ಸರ್ಕಾರಕ್ಕೆ ಮತದಾರರು ಮನ್ನಣೆ ನೀಡಿದ್ದಾರೆ. ಬಿಜೆಪಿ ಸರ್ಕಾರಕ್ಕೆ ಪೂರ್ಣ ಬಹುಮತ ಲಭಿಸಿದೆ. ಮುಂದಿನ ಮೂರೂವರೆ ವರ್ಷಗಳ ಕಾಲ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಉತ್ತಮ ಆಡಳಿತ ನೀಡುತ್ತದೆ’ ಎಂದರು.

‘ಬಿಜೆಪಿಯ 12 ಅಭ್ಯರ್ಥಿಗಳು ಜಯ ಸಾಧಿಸಿದ್ದು, ಸ್ಥಿರ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟಂತೆ ಆಗಿದೆ. ರಾಜ್ಯದಲ್ಲಿ ಬಿಜೆಪಿ, ಕೇಂದ್ರದಲ್ಲಿಯೂ ಬಿಜೆಪಿ ಇರುವುದರಿಂದ ಮತ್ತಷ್ಟು ಅನುದಾನ ಹರಿದು ಬರಲಿದೆ’ ಎಂದರು.

ಶರಣಭೂಪಾಲರೆಡ್ಡಿ, ಸ್ವಾಮಿದೇವ ದಾಸನ್, ಬಸವರಾಜಪ್ಪಗೌಡ ಚಿಕ್ಕಬೂದೂರು, ಅಂಬಯ್ಯ ಶಾಬದಿ, ವೆಂಕಟರೆಡ್ಡಿ ಅಬ್ಬೆತುಮಕೂರ, ಶಾಂತಗೌಡ ಪಗಲಪುರ, ಸಾಹೇಬಗೌಡ, ಸುರೇಶ ಚವ್ಹಾಣ, ವಿಲಾಸ ಪಾಟೀಲ, ವೀಣಾ ಮೋದಿ, ಮಹೇಶ ರೆಡ್ಡಿ ಮುದ್ನಾಳಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT