ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕತಾ ದಿವಸ; ಪೊಲೀಸರಿಂದ ಮ್ಯಾರಥಾನ್

ಯಾದಗಿರಿ: ‘ರನ್ ಫಾರ್ ಯುನಿಟಿ’ ಮ್ಯಾರಥಾನ್ ಓಟ
Last Updated 31 ಅಕ್ಟೋಬರ್ 2019, 15:29 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾ ಪೊಲೀಸ್ ಇಲಾಖೆಯಿಂದ ರಾಷ್ಟ್ರೀಯ ಏಕತಾ ದಿವಸದ ಪ್ರಯುಕ್ತ ನಗರದಲ್ಲಿ ಗುರುವಾರ ಆಯೋಜಿಸಿದ್ದ ‘ರನ್ ಫಾರ್ ಯುನಿಟಿ’ ಮ್ಯಾರಥಾನ್‌ಗೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಚಾಲನೆ ನೀಡಿದರು.

ದೇಶದ ಪ್ರಥಮ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದ್ದು, ಆ ಪ್ರಯುಕ್ತ ಮ್ಯಾರಥಾನ್ ಹಮ್ಮಿಕೊಳ್ಳಲಾಗಿತ್ತು.

ನಗರದ ಲುಂಬಿನಿವನದಿಂದ ಪ್ರಾರಂಭಗೊಂಡ ಮ್ಯಾರಥಾನ್ ಶಾಸ್ತ್ರೀ ವೃತ್ತ, ಸುಭಾಷ್ ವೃತ್ತ, ಪದವಿ ಮಹಾವಿದ್ಯಾಲಯ ಕ್ರಾಸ್, ಕನಕ ವೃತ್ತ ಹಾಗೂ ಅಂಬೇಡ್ಕರ್ ವೃತ್ತದ ಮೂಲಕ ಲುಂಬಿನಿವನ ತಲುಪಿ ಮುಕ್ತಾಯಗೊಂಡಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನವಣೆ, ಡಿವೈಎಸ್ಪಿ ಯು.ಶರಣಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ ಚವ್ಹಾಣ್‌, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಸಿಪಿಐ ಶರಣಗೌಡ ನ್ಯಾಮಣ್ಣೋರ, ನಗರ ಠಾಣೆ ಪಿಎಸ್‍ಐ ಬಾಪುಗೌಡ ಪಾಟೀಲ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಪ್ರಾಂಶುಪಾಲ ಡಾ.ಸುಭಾಶ್ಚಂದ್ರ ಕೌಲಗಿ, ಉಪನ್ಯಾಸಕ ಬಿಸಲಪ್ಪ ಕಟ್ಟಿಮನಿ, ಐಎಂಎ ಕಾರ್ಯದರ್ಶಿ ಡಾ.ಪ್ರಸನ್ನ ಪಾಟೀಲ, ಡಾ.ಜೆ.ಡಿ.ಹುನಗುಂಟಿ ಹಾಗೂ ಡಾ.ಪ್ರದೀಪರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT