ಸೋಮವಾರ, ಸೆಪ್ಟೆಂಬರ್ 28, 2020
24 °C
8 ಪರೀಕ್ಷಾ ಕೇಂದ್ರಗಳಲ್ಲಿ ಪಿ.ಯು ಪೂರಕ ಪರೀಕ್ಷೆ

ಉರ್ದು ಪತ್ರಿಕೆ: 7 ವಿದ್ಯಾರ್ಥಿಗಳು ಹಾಜರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ಸೆಪ್ಟೆಂಬರ್ 7ರಿಂದ ಆರಂಭವಾಗಿದ್ದು, ಮೊದಲ ಪತ್ರಿಕೆ ಸೋಮವಾರ ಉರ್ದು ವಿಷಯದ ಪರೀಕ್ಷೆ ನಡೆಯಿತು. ಆಯಾ ಕಾಲೇಜುಗಳಲ್ಲಿ ಸ್ಯಾನಿಟೈಜರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿತ್ತು.

ಜಿಲ್ಲೆಯಲ್ಲಿ ಉರ್ದು ವಿಷಯಕ್ಕೆ 9 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 7 ವಿದ್ಯಾರ್ಥಿಗಳು ಹಾಜರಾಗಿದ್ದರೆ ಇಬ್ಬರು ಗೈರಾಗಿದ್ದರು.

ಸುರಪುರ ಬಾಲಕರ ಕಾಲೇಜಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅದರಲ್ಲಿ ಒಬ್ಬ ವಿದ್ಯಾರ್ಥಿ ಹಾಜರಾಗಿ ಮತ್ತೊಬ್ಬರು ಗೈರಾಗಿದ್ದಾರೆ. ಶಹಾಪುರದ ಬಾಲಕರ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿದ್ದರು. ಯಾದಗಿರಿಯ ಬಾಲಕರ ಕಾಲೇಜಿನಲ್ಲಿ ನಾಲ್ಕು ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಮೂವರು ಹಾಜರಾಗಿ ಒಬ್ಬರು ಗೈರಾಗಿದ್ದಾರೆ. ನ್ಯೂ ಕನ್ನಡ ಪಿಯು ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಪರೀಕ್ಷೆಗೆ ನೋಂದಾಯಿಸಿಕೊಂಡು ಹಾಜರಾಗಿದ್ದಾರೆ. ಗುರುಮಠಕಲ್ ತಾಲ್ಲೂಕಿನ ಸರ್ಕಾರಿ ಪಿಯು ಬಾಲಕರ ಕಾಲೇಜಿನಲ್ಲಿ ಒಬ್ಬರು ಹಾಜರಾಗಿದ್ದಾರೆ.

ಸೆಪ್ಟೆಂಬರ್ 8ರಂದು ಇತಿಹಾಸ ಮತ್ತು ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ ಎಂದು ಡಿಡಿಪಿಯು ಚಂದ್ರಕಾಂತ ಹಿಳ್ಳಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪೂರಕ ಪರೀಕ್ಷೆ 19ರವರೆಗೆ ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.