ಭಾನುವಾರ, ಸೆಪ್ಟೆಂಬರ್ 26, 2021
21 °C

ಕಾರ್ಮಿಕರಿಗೆ ಸರ್ಕಾರದ ಸೌಲಭ್ಯ ಬಳಸಿಕೊಳ್ಳಿ: ಶಾಸಕ ವೆಂಕಟರೆಡ್ಡಿ ಮುದ್ನಾಳ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಕಾರ್ಮಿಕರು ಸರ್ಕಾರದ ಯೋಜನೆಗಳ ಲಾಭ ಪಡೆಯುವ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.

ನಗರದ ವಾರ್ಡ್‌ ಸಂಖ್ಯೆ 9ರಲ್ಲಿ ಕಾರ್ಮಿಕ ಇಲಾಖೆಯಿಂದ 350 ಆಹಾರ ಕಿಟ್‌ಗಳನ್ನು ವಿತರಿಸಿ ಮಾತನಾಡಿ, ಬಿಜೆಪಿ ಸರ್ಕಾರ ಬಂದ ಮೇಲೆ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಬಡ ಕಾರ್ಮಿಕರಿಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ಕಾರ್ಮಿಕರ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದರು.

ಈಚೆಗೆ ಜಿಲ್ಲೆಯ ಕಾರ್ಮಿಕ ಇಲಾಖೆ ಅಧಿಕಾರಿ ಶ್ವೇತಾ, ಜಿಲ್ಲೆಯಾದ್ಯಂತ ಕಾರ್ಮಿಕರನ್ನು ಗುರುತಿಸಿ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ. ಶಾಸಕರ ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಕಾರ್ಮಿಕ ಇಲಾಖೆ ಅಧಿಕಾರಿ ಶ್ವೇತಾ ಮಾತನಾಡಿ, ಕಾರ್ಮಿಕರಿಗೆ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಲಾಭ ಪ್ರತಿಯೊಬ್ಬ ಕಾರ್ಮಿಕರು ಪಡೆಯಬೇಕು ಎಂದರು.

ಈ ವೇಳೆ ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ಉಪಾಧ್ಯಕ್ಷೆ ಪ್ರಭಾವತಿ ಮಾರುತಿ ಕಲಾಲ್, ಯುಡಾ ಅಧ್ಯಕ್ಷ ಬಸವರಾಜ ಚಂಡರಕಿ, ನಗರಸಭೆ ಸದಸ್ಯ ಚನ್ನಕೇಶವ ಬಾಣತಿಹಾಳ, ನಾಗಪ್ಪ ಬೆನಕಲ್, ಮಹಾದೇವಪ್ಪ ಯಲಸತ್ತಿ, ಶಂಕರ ಗೋಸಿ, ನಾಗಪ್ಪ ಬೆನಕಲ್, ನಾಗರಾಜ ಬಿರನೂರ, ಪೀರ್ ಅಹ್ಮದ್ ಇದ್ದರು.‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.