ವಡಗೇರಾ: ‘ಇದೇ ಮೇ 31ರಂದು ವಡಗೇರಾ ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ’ ಎಂದು ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಶಶಾಂಕ.ಬಿ.ಮೇಟಿ ತಿಳಿಸಿದರು.

ಪಟ್ಟಣದ ಡಿಡಿಯ ಸಂಸ್ಥೆಯ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಪಟ್ಟಣದ ಡಿಡಿಯು ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮೇ 31ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಶಿಬಿರ ನಡೆಯಲಿದೆ. ಹೀಗಾಗಿ ಎಲ್ಲರು ಇದರ ಸದುಪಯೋಗ ಪಡೆದುಕೊಳ್ಳುಬೇಕು. ಕಣ್ಣಿನ ತಪಾಸಣೆ, ಹೃದಯ ರೋಗ, ಎಲುಬು ಕೀಲುಗಳ ತಪಾಸಣೆ, ಸಕ್ಕರೆ ರೋಗ, ಕ್ಯಾನ್ಸರ್ ತಪಾಸಣೆ ಮೂತ್ರಪಿಂಡಗಳ ತಪಾಸಣೆ ಹಾಗೂ ಇನ್ನಿತರ ರೋಗಗಳಿಗೆ ಚಿಕಿತ್ಸೆ ಕೊಡಿಸಲಾಗುವುದು’ ಎಂದರು.

‘ಶಿಬಿರದಲ್ಲಿ ಭಾಗವಹಿಸುವವರು ತಮ್ಮ ಎರಡು ಪಾಸ್ಪೋರ್ಟ್ ಸೈಜಿನ ಭಾವಚಿತ್ರ ಆಧಾರ ಕಾರ್ಡ್, ಪಡಿತರ ಚೀಟಿ ತರಬೇಕು’ ಎಂದು ಮಾಹಿತಿಯನ್ನು ನೀಡಿದರು.

‘ಈ ಶಿಬಿರವನ್ನು ಡಿಡಿಯು ಸಮೂಹ ಶಿಕ್ಷಣ ಸಂಸ್ಥೆ ವಡಗೇರಾ, ಸಪ್ತಗಿರಿ ಆಸ್ಪತ್ರೆ ಬೆಂಗಳೂರು, ಸ್ವರಾಧ್ಯ ಎಲುಬು ಮತ್ತು ಕೀಲು ಆಸ್ಪತ್ರೆ ಬೆಂಗಳೂರು, ಶಂಕರ್ ಕಣ್ಣಿನ ಆಸ್ಪತ್ರೆ ಬೆಂಗಳೂರು , ಭೀಮಣ್ಣ ಮೇಟಿ ಫೌಂಡೇಶನ್, ವಿ. ಎಂ .ಎಂ ಟ್ರಸ್ಟ್ ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ ಯಾದಗಿರಿ ವೈದ್ಯಧಿಕಾರಿಗಳು ಹಾಗೂ ನೇತ್ರಾಧಿಕಾರಿಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಹೊನ್ನಯ್ಯ ಕೊಂಕಲ್, ಮುಖ್ಯಶಿಕ್ಷಕ ಜಸ್ಟಿನ್ ಕೆ. ಎಸ್, ಖಂಡಪ್ಪ ವರಿಕೇರಿ, ಯೋಗೇಶ ರೆಡ್ಡಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-30-1623956672

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.