ವಡಗೇರಾ: ಪತ್ರಕರ್ತರು ಆರ್ಥಿಕವಾಗಿ ಸಬಲರಾಗಲು ಸಹಕಾರ ಸಂಘದ ಅಗತ್ಯವಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಹೇಳಿದರು.

ವಡಗೇರಾ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘ ರಚಿಸುವ ನಿಮಿತ್ತ ನಡೆದ ಸಭೆಯಲ್ಲಿ ಮಾತನಾಡಿದರು.

ಪತ್ರಕರ್ತರು ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಆದರೆ, ಆರ್ಥಿಕವಾಗಿ ಪ್ರಗತಿ ಒತ್ತು ಕೊಡುವ ನಿಟ್ಟಿನಲ್ಲಿ ಗಮನ ಹರಿಸುವುದಿಲ್ಲ. ಸಹಕಾರ ಸಂಘ ಸ್ಥಾಪನೆ ಮಾಡುವುದರಿಂದಾಗಿ ಸಾಕಷ್ಟು ಅನುಕೂಲವಾಗಲಿದೆ. ಸರ್ಕಾರದ ನಿಯಮಗಳ ಅನ್ವಯ ಸಹಕಾರ ಸಂಘ ಸ್ಥಾಪಿಸಲಾಗುತ್ತದೆ. ಇದನ್ನು ಬಲಿಷ್ಠಗೊಳಿಸಲು ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಲಾಗುವುದು ಎಂದರು.

ಪತ್ರಕರ್ತರ ಸಹಕಾರ ಇದ್ದರೆ ಅವರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಕೂಡ ನೀಡಲು ಅನುಕೂಲವಾಗುತ್ತದೆ. ಖಾಸಗಿ ಬ್ಯಾಂಕ್ ಗಳು ದುಬಾರಿ ಬಡ್ಡಿ ದರದಲ್ಲಿ ಸಾಲ ನೀಡುತ್ತವೆ. ಇದನ್ನು ಮನಗಂಡು ಪತ್ರಕರ್ತರಿಗಾಗಿ ಸಹಕಾರ ಸಂಘ ರಚಿಸಲಾಗುತ್ತಿದೆ ಎಂಬ ಮಾಹಿತಿ ನೀಡಿದರು.

ಪ್ರತಿಯೊಬ್ಬ ಪತ್ರಕರ್ತರು ಷೇರು ಹಾಕುವ ಮೂಲಕ ಸಹಕಾರ ಸಂಘದ ಪ್ರಗತಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎಂದರು.

ತಾಲ್ಲೂಕು ಘಟಕದ ಅಧ್ಯಕ್ಷ ನಾಮದೇವ ವಾಟ್ಕರ್, ಜಿಲ್ಲಾ ಕಾರ್ಯದರ್ಶಿ ಸಿದ್ದಪ್ಪ ಲಿಂಗೇರಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕಾಡಂನೋರ, ಪತ್ರಕರ್ತರಾದ ನಾಗಪ್ಪ ನಾಯ್ಕಲ್, ನಿಂಗಣ್ಣ ಜಡಿ, ಸಲೀಂ ಹಾಗೂ ಇನ್ನಿತರರು ಉಪಸ್ಥಿರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.