ವಡಗೇರಾ: ‘ಗ್ರಾಮೀಣ ಭಾಗದ ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಶಶಾಂಕ ಬಿ.ಮೇಟಿ ಹೇಳಿದರು.

ಪಟ್ಟಣದ ಡಿಡಿಯು ಶಿಕ್ಷಣ ಸಮೂಹ ಸಂಸ್ಥೆ, ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ, ಸ್ವರಾಧ್ಯ ಎಲುಬು ಮತ್ತು ಕೀಲು ಆಸ್ಪತ್ರೆ, ಶಂಕರ್ ಕಣ್ಣಿನ ಆಸ್ಪತ್ರೆ, ಭೀಮಣ್ಣ ಮೇಟಿ ಫೌಂಡೇಶನ್, ವಿಎಂಎಂ ಟ್ರಸ್ಟ್ ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ, ವೈದ್ಯಾಧಿಕಾರಿಗಳು ಮತ್ತು ನೇತ್ರಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಇಂದಿನ ಅವಸರದ ಜೀವನದಲ್ಲಿ ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಗಮನಹರಿಸದೆ ಇರುವುದರಿಂದ ಅನೇಕ ರೋಗ ರುಜಿನಗಳಿಗೆ ತುತ್ತಾಗಿ ಅಕಾಲಿಕ ಮರಣ ಹೊಂದುತ್ತಿದ್ದಾರೆ. ರೋಗ ರುಜಿನನಗಳಿಂದ ಮುಕ್ತಿ ಹೊಂದಬೇಕಾದರೆ ಆಗಾಗ ವೈದ್ಯರನ್ನು ಕಂಡು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಆರೋಗ್ಯ ಶಿಬಿರದಲ್ಲಿ ಹೃದಯ ರೋಗ, ಎಲುಬು–ಕೀಲುಗಳ ತಪಾಸಣೆ, ಸಕ್ಕರೆ ರೋಗ, ಕ್ಯಾನ್ಸರ್ ತಪಾಸಣೆ, ಮೂತ್ರಪಿಂಡಗಳ ತಪಾಸಣೆ ಸೇರಿದಂತೆ ಇನ್ನಿತರ ರೋಗಗಳಿಗೆ ನುರಿತ ವೈದ್ಯರಿಂದ ತಪಾಸಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಹೊನ್ನಯ್ಯ ಕೊಂಕಲ್, ಮುಖ್ಯ ಶಿಕ್ಷಕ ಜಸ್ಟಿನ್ ಕೆ.ಎಸ್., ಖಂಡಪ್ಪ ವರಿಕೇರಿ, ಯೋಗೇಶ ರೆಡ್ಡಿ, ವೈದ್ಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಶಿಕ್ಷಕ ನಿಂಗಯ್ಯ ಹಾಗೂ ಹೊನ್ನಯ್ಯ ನಿರೂಪಿಸಿ, ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-30-1377757606

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.