ವಡಗೇರಾ: ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭೋತ್ಸವದ ಪ್ರಥಮ ದಿನ ಸೋಮವಾರ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳನ್ನು ಹೂ ಹಾಗೂ ಸಿಹಿ ನೀಡಿ ಬರಮಾಡಿಕೊಂಡರು.

ನಂತರ ಮಾತನಾಡಿದ ಮುಖ್ಯ ಶಿಕ್ಷಕ ಅಯ್ಯಣ್ಣ ಬಡಿಗೇರ, ‘ಈ ವರ್ಷ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗಾಗಿ ವಿಶೇಷ ತರಗತಿ ಹಾಗೂ ಪರಿಹಾರ ಬೋಧನೆಯನ್ನು ಆರಂಭಿಸಲಾಗುವುದು’ ಎಂದರು.

ಮುಂಬರುವ ದಿನಗಳಲ್ಲಿ ಎಸ್ಎಸ್ಎಲ್ಸಿ ಮಕ್ಕಳಿಗಾಗಿ ಪ್ರತಿವಾರ ವಿಷಯವಾರು ಕಿರು ಪರೀಕ್ಷೆ ನಡೆಸುವುದರ ಜೊತೆಗೆ ವಿಶೇಷ ವೇಳಾಪಟ್ಟಿ ಸಿದ್ದಪಡಿಸಿ ಆ ನಿಟ್ಟಿನಲ್ಲಿ ಶಿಕ್ಷಕರು ಬೋಧನೆ ಮಾಡಲು ಸೂಚಿಸಲಾಗವುದು’ ಎಂದರು.

ಶಿಕ್ಷಕ ಶರಣಪ್ಪ, ಮಲ್ಲಪ್ಪ ಯಂಟಮಾನ, ಕಸ್ತುರಬಾ ವಸತಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀದೇವಿ, ಸಾಗರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-30-20487979

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.