ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲ್ಮೀಕಿ ಮಠದಿಂದ ಸಮುದಾಯದ ಜನಗಣತಿ: ಪ್ರಸನ್ನಾನಂದ ಸ್ವಾಮೀಜಿ

ಜಾತಿ ಜನಗಣತಿ ವರದಿ ನನೆಗುದಿಗೆ: ಸ್ವಾಮೀಜಿ ಅಸಮಾಧಾನ
Last Updated 4 ಸೆಪ್ಟೆಂಬರ್ 2019, 12:50 IST
ಅಕ್ಷರ ಗಾತ್ರ

ಯಾದಗಿರಿ: ‘ರಾಜ್ಯದಲ್ಲಿರುವ ವಾಲ್ಮೀಕಿ ಸಮುದಾಯದವರ ಗಣತಿಯನ್ನು ವಾಲ್ಮೀಕಿ ಮಠ ನಡೆಸಿದ್ದು, ಫೆಬ್ರುವರಿ ಎರಡನೇ ವಾರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ಎಂದು ರಾಜನಹಳ್ಳಿಯ ವಾಲ್ಮೀಕಿ ಗುರುಪೀಠಾಧ್ಯಕ್ಷ ಪ್ರಸನ್ನಾನಂದ ಸ್ವಾಮೀಜಿ ಅವರು ಹೇಳಿದರು.

ನಗರದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಜಾತಿ ಜನಗಣತಿ ನಡೆಸಿ ಅದರ ಆಧಾರದ ಮೇಲೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವುದಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಘೋಷಿಸಿತ್ತು. ಜನಗಣತಿ ನಡೆದು ವರದಿಯೂ ಸಿದ್ಧವಾಗಿತ್ತು. ಆದರೆ, ವರದಿಯನ್ನು ಬಹಿರಂಗಪಡಿಸಲಿಲ್ಲ. ಹಾಗಾಗಿ, ವಾಲ್ಮೀಕಿ ಗುರುಪೀಠ ಸಮುದಾಯದ ಗಣತಿ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಮುಕ್ತಾಯದ ಹಂತದಲ್ಲಿದೆ’ ಎಂದು ಜಾತಿ ಜನಗಣತಿ ತಿಳಿಸಿದರು.

‘ರಾಜ್ಯದಲ್ಲಿ ಕೈಗೊಂಡಿದ್ದ ಜಾತಿ ಜನಗಣತಿ ವರದಿಯನ್ನು ಬಹಿರಂಗಗೊಳಿಸಲು ಆಳುವವರು ಹಿಂದೇಟು ಹಾಕಲು ಬಹುಸಂಖ್ಯಾತ ಸಮುದಾಯಗಳ ಪಟ್ಟಭದ್ರ ಹಿತಾಸಕ್ತಿಗಳ ಒತ್ತಡ ಕಾರಣವಾಗಿದೆ. ಬಹುಸಂಖ್ಯಾತರ ಹೆಸರಲ್ಲಿ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ಪಡೆಯುತ್ತಿರುವ ಕೆಲ ಸಮುದಾಯದ ಮುಖಂಡರಿಗೆ ಜಾತಿ ಜನಗಣತಿ ಬಹಿರಂಗಗೊಂಡರೆ ಸೌಲಭ್ಯದಿಂದ ವಂಚಿತರಾಗುತ್ತೇವೆ ಎನ್ನುವ ಭಯ ಕಾಡುತ್ತಿದೆ. ಈ ಕಾರಣಕ್ಕಾಗಿಯೇ ವರದಿ ಬಹಿರಂಗಗೊಳಿಸದಂತೆ ತಡೆಯುತ್ತಿವೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT