ಯಾದಗಿರಿ: ನಕಲಿ ಜಾತಿ ಪ್ರಮಾಣ ಪತ್ರ ತಡೆಗಟ್ಟಲು ಆಗಸ್ಟ್ 13ರಂದು ನಗರದಲ್ಲಿ ಹೋರಾಟ ಮಾಡಲು ಉತ್ತರ ಕರ್ನಾಟಕ ವಾಲ್ಮೀಕಿ ನಾಯಕ ಸಮಾಜದ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾ ವಾಲ್ಮೀಕಿ ಭವನದಲ್ಲಿ ಭಾನುವಾರ ಜಿಲ್ಲಾ ಮಟ್ಟದ ಸಭೆ ನಡೆಸಿದ ಸಮುದಾಯದ ಮುಖಂಡರು, ಹೋರಾಟ ಮಾಡುವ ನಿರ್ಣಯ ತೆಗೆದುಕೊಂಡರು.

ಈ ವೇಳೆ ಉತ್ತರ ಕರ್ನಾಟಕ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಮಾರೆಪ್ಪ ನಾಯಕ ಮಗ್ದಂಪುರ ಮಾತನಾಡಿ, ‘ಆಗಸ್ಟ್ 11ರಿಂದ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಲಿದೆ. ಈ ಅಧಿವೇಶನದಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳು ತೆಗೆದುಕೊಂಡವರ ವಿರುದ್ಧ ಕಾನೂನು ಕ್ರಮ ಆಗಬೇಕು. ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಗಳಿಂದ ಆಯ್ಕೆಯಾದ ಶಾಸಕರು ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಬೇಕು’ ಎಂದು ಹೇಳಿದರು.

‘ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ವಾಲ್ಮೀಕಿ ಸಮಾಜದ ಬೇಡಿಕೆಗಳಿಗೆ ಸ್ಪಂದನೆ ನೀಡುತ್ತಿಲ್ಲ. ತಮ್ಮ ಮುಂದಿನ ರಾಜಕೀಯ ಭವಿಷ್ಯದ ಸಲುವಾಗಿ ನಮ್ಮ ಸಮಾಜಕ್ಕೆ ಅನ್ಯಾಯ ಎಸುಗುತ್ತಿದ್ದಾರೆ’ ಎಂದರು.

‘ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯ ಸಮೀಪ ಮಹರ್ಷಿ ವಾಲ್ಮೀಕಿ ಪುತ್ಥಳಿ ನಿರ್ಮಾಣ ಸ್ಥಳಕ್ಕೆ ಸಂಬಂಧಿಸಿದ ದಾಖಲಾತಿ ಇದೆ. ಆದರೂ ಎ ಖಾತಾ ಕೊಡಲು ಸಂಬಂಧಿಸಿದ ನಗರ ಸಭೆ ಅಧಿಕಾರಿಗಳು ನೀಡುತ್ತಿಲ್ಲ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಸಚಿವರನ್ನು ನೇಮಿಸದೆ ನಮ್ಮ ಸಮಾಜಕ್ಕೆ ಬರುವ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಈ ಮೂಲಕ ತುಳಿತಕ್ಕೆ ಒಳಗಾದ ಸಮಾಜವನ್ನು ಮೂಲೆಗುಂಪು ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.

ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾ ಅಧ್ಯಕ್ಷ ಗೌಡಪ್ಪ ಗೌಡ ಆಲ್ದಾಳ ಮಾತನಾಡಿ, ‘ರಾಜ್ಯದಾದ್ಯಂತ ನಕಲಿ ಜಾತಿ ಪ್ರಮಾಣ ಪತ್ರಗಳು ವಿತರಣೆ ಆಗುತ್ತಿದೆ. ಇದನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ವಿಧಾನ ಸಭೆ ಅಧಿವೇಶನದಲ್ಲಿ ವಾಲ್ಮೀಕಿ ಸಮಾಜದ ಬೇಡಿಕೆಗಳ ಬಗ್ಗೆ ಚರ್ಚೆ ಆಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ರಾಜ್ಯದಾದ್ಯಂತ ಹೋರಾಟ ಮಾಡಲು ಮುಂದಾಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಸಮಾಜದ ಮುಖಂಡರಾದ ಸಿದ್ದಲಿಂಗಪ್ಪ ನಾಯಕ, ಚಂದ್ರಕಾಂತ ಹತ್ತಿಕುಣಿ, ಶರಣಪ್ಪ ಜಾಕನಹಳ್ಳಿ, ಗಂಗಾಧರ ನಾಯಕ, ದೊಡ್ಡಯ್ಯ ನಾಯಕ, ಅಂಬು ನಾಯಕ, ಸಾಹೇಬ ಗೌಡ ನಾಯಕ ಗೌಡಗೇರ, ಮರೆಪ್ಪ ಪ್ಯಾಟಿ, ಭೀಮನಗೌಡ, ಕಾಶಪ್ಪ ನಾಯಕ, ಶೇಖರ ದೊರೆ, ಮಲ್ಲಿಕಾರ್ಜುನ ಕಟಕಟಿ, ಮಲ್ಲಿಕಾರ್ಜುನ ನಿಲಹಳ್ಳಿ, ಮೋನಪ್ಪ ಹಳಿಗೇರ, ಬಸವರಾಜ ಗೊಂದೆನೂರ, ನಾಗರಾಜ ಪ್ಯಾಪ್ಲಿ, ಚಂದಪ್ಪ ರಾಮಸಮುದ್ರ, ಬಸವರಾಜ ಹತ್ತಿಕುಣಿ, ಭೀಮರಾಯ ರಾಮಸಮುದ್ರ, ಸಿದ್ದಪ್ಪ ಕ್ಯಾಸಪನಳ್ಳಿ, ಲಕ್ಷ್ಮಣ ಜೀನಕೇರಿ, ಸಾಬು ನಿಲಹಳ್ಳಿ ಸೇರಿ ಹಲವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.