ಸೋಮವಾರ, ಆಗಸ್ಟ್ 26, 2019
27 °C

ನಗರದಲ್ಲಿ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ

Published:
Updated:
Prajavani

ಯಾದಗಿರಿ: ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬ ನಗರದಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ನಗರದ ವಿವಿಧೆಡೆ ದೇವಸ್ಥಾನಗಳಲ್ಲಿ ಸಾಮೂಹಿಕ ಪೂಜೆ ನೆರವೇರಿಸಲಾಯಿತು. ಜನ ತಮ್ಮ ತಮ್ಮ ಮನೆಗಳಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮದಿಂದ ನೆರವೇರಿಸಿದರು.

ಮಹಿಳೆಯರು  ಹೊಸ ಬಟ್ಟೆ ಧರಿಸಿ, ಜಗುಲಿಯನ್ನು ಹೂವಿನಿಂದ ಸಿಂಗಾರಗೊಳಿಸಿ ವರಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ ಸೀರೆ, ತಾಳಿ, ಬಂಗಾರದ ಆಭರಣ, ಹೂಗಳಿಂದ ಅಲಂಕರಿಸಿ, ನೈವೇದ್ಯ ಮಾಡಿ ಅರ್ಪಿಸಿದರು. ಸಂಜೆ ಮುತ್ತೈದೆಯರನ್ನು ಆಮಂತ್ರಿಸಿ ಅರಿಶಿಣ ಕುಂಕುಮ, ಹೂವು, ಹಣ್ಣು ನೀಡುವ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದರು.

ಹಬ್ಬದ ಪ್ರಯುಕ್ತ ಮಹಿಳೆಯರು ಮನೆಗಳಲ್ಲಿ ಸಿಹಿ ಅಡುಗೆ ಮಾಡಿ, ನೆರೆ ಹೊರೆಯವರಿಗೆ ಹಂಚಿ ಸಂಭ್ರಮಿಸಿದರು.

Post Comments (+)