ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

Last Updated 4 ಜೂನ್ 2020, 16:53 IST
ಅಕ್ಷರ ಗಾತ್ರ

ಕೆಂಭಾವಿ: ಕೂಲಿಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಏವೂರ ಗ್ರಾಮ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿಯವರಿಗೆ ಬರೆದಿರುವ ಮನವಿ ಪತ್ರವನ್ನು ಏವೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸಲಾಯಿತು.

ಈ ವೇಳೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನಬಿರಸೂಲ್ ನದಾಫ್ ಮಾತನಾಡಿ, ಎಲ್ಲಾ ಕೂಲಿ ಕಾರ್ಮಿಕರಿಗೆ ತಿಂಗಳಿಗೆ ₹7500 ಆರ್ಥಿಕ ನೆರವು ನೀಡಬೇಕು. ಎಲ್ಲಾ ವಲಸೆ ಕಾರ್ಮಿಕರಿಗೆ ವಿಶೇಷ ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿದರು.

‌ಆತ್ಮಹತ್ಯೆ ಮಾಡಿಕೊಂಡಿರುವ ವಲಸೆ ಕಾರ್ಮಿಕರ ಕುಟುಂಬಗಳಿಗೆ ವಿಶೇಷ ಆರ್ಥಿಕ ನೆರವು ಗರಿಷ್ಠ ಪರಿಹಾರ ನೀಡಬೇಕು. ದಿನಕ್ಕೆ ₹600 ರಂತೆ ವರ್ಷದಲ್ಲಿ 200 ದಿನಗಳು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಕೊಡಬೇಕು ಎಂದರು.

ಕಾರ್ಮಿಕರ ಕಾಯ್ದೆಯನ್ನು ಈಗಾಗಲೇ ತಗೆದು ಹಾಕಿದ್ದು ಅದನ್ನು ಮರು ಜಾರಿಗೊಳಿಸಬೇಕು. 2018ರ ಮಾದರಿ ಗುತ್ತಿಗೆ ಕೃಷಿ ಕಾಯ್ದೆಯನ್ನು, ಮಾದರಿ ಭೂಗೇಣಿ ಕಾಯ್ದೆಯನ್ನು ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ಕೈಬಿಡಬೇಕು ಎಂದರು. ಗ್ರಾಮ ಘಟಕದ ಅಧ್ಯಕ್ಷ ಯಲ್ಲಪ್ಪ ಗುಡಿಮನಿ, ಜೆಟ್ಟೆಪ್ಪ ಗುಡಿಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT