ಬುಧವಾರ, ಆಗಸ್ಟ್ 10, 2022
24 °C

ಬಿಜೆಪಿಯಿಂದ ವಿವಿಧೆಡೆ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಮಾಡಲಾಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಕಚೇರಿ ಆವರಣದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ದೇಶದ ಐಕ್ಯತೆ ಹಾಗೂ ಏಕೀಕರಣಕ್ಕಾಗಿ ಸರ್ದಾರ್ ವಲ್ಲಭಭಾಯ್‌ ಪಟೇಲರು ಪಟ್ಟಿರುವ ಶ್ರಮ ಯುವಕರಿಗೆ ಮಾರ್ಗದರ್ಶನವಾಗಲಿ ಎಂದು ಹೇಳಿದರು. 

ಬಿಜೆಪಿ ಜಿಲ್ಲಾಧಕ್ಷ ಡಾ.ಶರಣಭೂಪಾಲರಡ್ಡಿ, ಶಾಸಕ ವೆಂಕಟರೆಡ್ಡಿ ಮುದ್ನಾಳ, ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಚಂದ್ರಶೇಖರಗೌಡ ಮಾಗನೂರ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಲಲಿತಾ ಅನಪುರ, ಮುಖಂಡರಾದ ನಾಗರತ್ನ ಕುಪ್ಪಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೇಂದ್ರನಾಥ್ ನಾದ ಮತ್ತು ವೆಂಕಟರಡ್ಡಿ ಅಬ್ಬೆತುಮಕೂರು, ಯುಡಾ ಅಧ್ಯಕ್ಷ ಬಸುವರಾಜ ಚಂಡರಕಿ, ಸಾಯಬಣ್ಣ ಬೋರಬಂಡ, ಚನ್ನಗೌಡಬಿಳ್ಹಾರ್, ರವಿ ಮಾಲಿಪಾಟೀಲ, ಶರಣಗೌಡ ಬಾಡಿಯಾಳ, ಶಂಕರ್ ಸೋನಾರ್, ಸ್ವಾಮಿದೇವ ದಾಸನಕೇರಿ, ಗೋಪಾಲ ದಾಸನಕೇರಿ, ವಿರುಪಾಕ್ಷಯ್ಯ ಸ್ವಾಮಿಹೆಡಗಿಮದ್ರಾ, ಶಕುಂತಲಾ, ಕಲ್ಪನಾ ಜೈನ್, ಮಲ್ಲನಗೌಡ ಗುರುಸುಣಿಗಿ, ಶರಣು ಆಶನಾಳ, ಕೃಷ್ಣಾರೆಡ್ಡಿ ಬಬಲಾದಿ ಸೇರಿದಂತೆ ಅನೇಕ ಮುಖಂಡರು ಹಾಗೂ ಜಿಲ್ಲಾ ಪದಾಧಿಕಾರಿಗಳು ಇದ್ದರು.

ಪ್ರಧಾನಿ ಮೋದಿ ಜನ್ಮದಿನ: ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 70ನೇ ಜನ್ಮ ದಿನದ ಸೇವಾ ಸಪ್ತಾಹ ಅಂಗವಾಗಿ ಜಿಲ್ಲಾ ಯುವ ಮೋರ್ಚಾ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಬಿಜೆಪಿ ‍ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.

ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮೌನೇಶ ಬೆಳಿಗೇರ ಪ್ರಾಸ್ತಾವಿಕ ಮಾತನಾಡಿದರು.
ನಗರ ಮಂಡಲ ಅಧ್ಯಕ್ಷ ಸುರೇಶ್ ಅಂಬಿಗೇರ, ಯುಡಾ ಸದಸ್ಯ ಮಂಜುನಾಥ್ ಜಡಿ, ರಿಯಾಜ್ ಕೊಲ್ಲುರ ಸೇರಿದಂತೆ ಯುವ ಮೋರ್ಚಾ ಕಾರ್ಯಕರ್ತರಿದ್ದರು. ವೆಂಕಟೇಶ್ ಗೋಳಪ್ಪನೋರ್ ಸ್ವಾಗತಿಸಿದರು. ಸಾಬಣ್ಣ ಮಡಿವಾಳ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು