ಗುರುವಾರ , ಏಪ್ರಿಲ್ 22, 2021
28 °C

ಬೈಕ್​ಗೆ ವಾಹನ ಡಿಕ್ಕಿ: ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಡಗೇರಾ: ತಾಲ್ಲೂಕಿನ ಹಾಲಗೇರಾ ಜಾತ್ರೆ ಮುಗಿಸಿಕೊಂಡು ಬೈಕ್ ಮೇಲೆ ಸ್ವಗ್ರಾಮ ವಡಗೇರಾಕ್ಕೆ ಬರುತ್ತಿದ್ದ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಪಟ್ಟಣ ಹೊರವಲಯದ ಭಾರತ ಪೆಟ್ರೋಲ್ ಬಂಕ್ ಸಮೀಪ ಭಾನುವಾರ ರಾತ್ರಿ ಸಂಭವಿಸಿದೆ.

ಮುನಿಯಪ್ಪ ಚಂದ್ರಯ್ಯ ದಾಸರ (28), ದೇವಪ್ಪ ರಂಗಪ್ಪ ದಾಸರ (30) ಮೃತಪಟ್ಟಿದ್ದಾರೆ.

ಅಪಘಾತದ ರಭಸಕ್ಕೆ ಮುನಿಯಪ್ಪ ದಾಸರ ಪಕ್ಕದ ಜಮೀನಲ್ಲಿ ಬಿದ್ದು ಮೃತಪಟ್ಟಿದ್ದಾನೆ. ದೇವಪ್ಪ ದಾಸರ ಎಂಬ ಯುವಕನನ್ನು ಹೆಚ್ಚಿನ ಚಿಕಿತ್ಸೆಗೆಂದು ಕಲಬುರ್ಗಿಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲಿ ಅಸುನೀಗಿದ್ದಾನೆ.

‘ಗೋಡಿಹಾಳ ಗ್ರಾಮದಿಂದ ಬರುವಾಗ ಹಾಲಗೇರಾ ಯಲ್ಲಮ್ಮನ ಜಾತ್ರೆಯಲ್ಲಿ ಮಂಡಕ್ಕಿ ತೆಗೆದುಕೊಂಡು ವಡಗೇರಾ ಪಟ್ಟಣಕ್ಕೆ ಹಿಂತಿರುಗುವಾಗ ಈ ಅಪಘಾತ ಸಂಭವಿಸಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂತ್ವನ: ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನಾರಡ್ಡಿ ಪಾಟೀಲ ತುನ್ನೂರು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಜೊತೆಗೆ ಎರಡು ಕುಟುಂಬಗಳಿಗೆ ತಲಾ ₹5 ಸಾವಿರ ವೈಯಕ್ತಿಕ ನೆರವು ನೀಡಿದರು.

ಕಾಂಗ್ರೆಸ್ ಮುಖಂಡರಾದ ಬಸವರಾಜ ಸೊನ್ನದ್, ಬನ್ನಪ್ಪಗೌಡ, ಸುಬ್ಬಣಗೌಡ, ಸೈಯದ್ ಅಲಿ, ಮಲ್ಲು ಹೆರುಂಡಿ, ದೇವು ಜಡಿ, ತಿರುಕಪ್ಪ, ಮಹಾದೇವಪ್ಪ ಗೋನಾಲ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು