ಶನಿವಾರ, ಮೇ 21, 2022
28 °C
ದೋರನಹಳ್ಳಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು

ಚುನಾವಣೆಯಲ್ಲಿ ಗೆಲುವು: ಕಾಂಗ್ರೆಸ್‌, ಬಿಜೆಪಿ ವಿಜಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ವಿಧಾನ ಪರಿಷತ್‌ (ಸ್ಥಳೀಯ ಸಂಸ್ಥೆ) ಚುನಾವಣೆಯಲ್ಲಿ ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರಿಂದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಜಿಲ್ಲಾ ಬಿಜೆಪಿ ಮುಖಂಡರು ಕಲಬುರಗಿಯಲ್ಲಿ ಅಭ್ಯರ್ಥಿ ಬಿ.ಜಿ.ಪಾಟೀಲ ಅವರನ್ನು ಸನ್ಮಾನಿಸಿದರು.

ಧಾರವಾಡ–ಹಾವೇರಿ–ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಗೆಲುವು ಸಾಧಿಸಿದ ಕಾರಣ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ್ ಮೈನೋದ್ಧೀನ್ ಜಮಾದಾರ್, ನಾಗಯ್ಯ ಗುತ್ತೇದಾರ ವಕೀಲ, ಗ್ರಾ.ಪಂ. ಸದಸ್ಯ ಹುಸೇನಸಾಬ್, ಗ್ರಾ.ಪಂ. ಮಾಜಿ ಸದಸ್ಯ ಶರಣು ಬಿರಾಳ, ಹಳ್ಳೇಪ್ಪ ಹುಡೇದ್‌, ಗಜಪ್ಪ ದೇಸಾಯಿ, ಯಲ್ಲಪ್ಪ ಹುಡೇದ್‌, ಯಂಕಪ್ಪ ತಂಗಡಗಿ, ಮಲ್ಲು, ರಾಯಪ್ಪ ಕೊಂಬಿನ್, ಮಲ್ಲು ಉಕ್ಕಿನಾಳ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು