ಶಹಾಪುರ: ‘ಬೇಸಿಗೆ ಕಾಲ ಆರಂಭಗೊಳ್ಳುತ್ತಲಿದೆ. ಅಧಿಕಾರಿಗಳು ಶುದ್ಧ ಕುಡಿಯುವ ನೀರಿನ ಕಡೆ ಆದ್ಯತೆ ನೀಡಬೇಕು. ಗ್ರಾಮದಲ್ಲಿ ಸ್ವಚ್ಛತೆಯ ನೈರ್ಮಲ್ಯ ಕಾಪಾಡಬೇಕು. ಸಾರ್ಜನಿಕರರ ಸಮಸ್ಯೆಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸ್ಥಳದಲ್ಲಿಯೇ ಸಮಸ್ಯೆ ಬಗೆಹರಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಲವೀಶ ಒರಡಿಯಾ ಅವರು ಪಿಡಿಒ ಅವರಿಗೆ ಸೂಚಿಸಿದರು.

ತಾಲ್ಲೂಕಿನ ಬಿರನೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆ ಆಲಿಸಿ ಅವರು ಮಾತನಾಡಿದರು.

ನಂತರ ಗ್ರಾಮದ ಶಾಲೆಗೆ ಭೇಟಿ ನೀಡಿ ಮಕ್ಕಳ ದಾಖಲಾತಿ ಹಾಗೂ ಹಾಜರಾತಿ ಬಗ್ಗೆ ಪರಿಶೀಲಿಸಿದರು.

ಶಾಲಾ ಕೋಣೆಗಳಲ್ಲಿನ ವ್ಯವಸ್ಥೆ ಸಮಸ್ಯೆ ಬಗ್ಗೆ ಎಸ್ಡಿಎಂಸಿ ಅಧ್ಯಕ್ಷರು ಗಮನಕ್ಕೆ ತಂದರು, ನೂತನ ಕೋಣೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ತ್ವರಿತವಾಗಿ ಕೆಲಸ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.

ತಾಪಂ ಇಒ ಬಸವರಾಜ ಶರಬೈ, ಸಹಾಯಕ ನಿರ್ದೇಶಕ ಶಾರದಮ್ಮ ನಾಗ್ಲೋಟ್, ಪಿಡಿಒ ದೇವರಾಜ ಮೌರ್ಯ, ಎಂಜಿನಿಯರ್ ವೆಂಕಟರಡ್ಡಿ, ಶಂಕರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.