ಬಾಹ್ಯಾಕಾಶ ಎಂಜಿನಿಯರ್ಗೆ ಗ್ರಾಮಸ್ಥರ ಅದ್ಧೂರಿ ಸ್ವಾಗತ

ತುಮಕೂರು (ಯಾದಗಿರಿ): ವಿದೇಶದಲ್ಲಿ ಉನ್ನತ ವ್ಯಾಸಂಗ ಮುಗಿಸಿ ಐದು ವರ್ಷಗಳ ಬಳಿಕ ಪ್ರಥಮ ಬಾರಿಗೆ ಹುಟ್ಟೂರಿಗೆ ಆಗಮಿಸಿದ ಬಾಹ್ಯಾಕಾಶ ಎಂಜಿನಿಯರ್ ಬಸವರಾಜ ಸಂಕೀನ್ ಅವರಿಗೆ ಗ್ರಾಮಸ್ಥರು ಬಾಜಾ, ಭಜಂತ್ರಿಗಳೊಂದಿಗೆ ಗ್ರಾಮದಲ್ಲಿ ಮೆರವಣಿಗೆ ನಡೆಸಿ ಅದ್ಧೂರಿಯಾಗಿ ಸ್ವಾಗತ ಕೋರಿದರು.
ವಡಗೇರಾ ತಾಲ್ಲೂಕಿನ ತುಮಕೂರು ಗ್ರಾಮದ ಬಸವರಾಜ ಸಂಕೀನ್ ಅವರು ಉನ್ನತ ವ್ಯಾಸಂಗಕ್ಕಾಗಿ ಸ್ಪೇನ್ ದೇಶದ ಬಾರ್ಸಿಲೋನಾಗೆ ತೆರಳಿದ್ದರು. ವ್ಯಾಸಂಗ ಮುಗಿಸಿಕೊಂಡು ಆಗಮಿಸಿದ ಹಿನ್ನೆಲೆಯಲ್ಲಿ ಇಡೀ ಗ್ರಾಮದಲ್ಲಿ ಸಂಭ್ರಮದ ವಾತಾವರಣ ಕಂಡು ಬಂತು. ಸುಮಾರು 2 ಕಿ.ಮೀ. ದೂರದವರೆಗೆ ಮೆರವಣಿಗೆ ಮಾಡಲಾಯಿತು. ಮಹಿಳೆಯರು ಆರತಿ ಮಾಡಿ ಹಣೆಗೆ ತಿಲಕವಿಟ್ಟು ಸ್ವಾಗತಿಸಿದರು. ಮೆರವಣಿಗೆಯುದ್ದಕ್ಕೂ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಸಾಧಕರ ಬಗ್ಗೆ ಮಕ್ಕಳಿಗೆ ತಿಳಿಸಿ: ಸಂಕೀನ್
ಬಾಹ್ಯಾಕಾಶ ಎಂಜಿನಿಯರ್ ಬಸವರಾಜ ಸಂಕೀನ್ ಮಾತನಾಡಿ, ‘ಉನ್ನತ ಶಿಕ್ಷಣ ಪಡೆಯಲು ನಾನು ಸ್ಪೇನ್ ದೇಶದ ಬಾರ್ಸಿಲೋನಾಕ್ಕೆ ತೆರಳಿದ್ದೆ. ಶಿಕ್ಷಣ ಮುಗಿದ ಬಳಿಕ ಅಲ್ಲಿಯೇ ಖಾಸಗಿ ಕಂಪನಿಯಲ್ಲಿ ಉದ್ಯೋಗ ದೊರಕಿತು. ಇದೀಗ ಮೊದಲ ಬಾರಿಗೆ ಊರಿಗೆ ಆಗಮಿಸಿದಾಗ ಗ್ರಾಮಸ್ಥರು ಅದ್ಧೂರಿಯಾಗಿ ಬರಮಾಡಿಕೊಂಡಿದ್ದು ಖುಷಿ ನೀಡಿದೆ’ ಎಂದರು. ‘ಗ್ರಾಮದ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಸಾಧಕರ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ಅವರಲ್ಲಿಯೂ ಆತ್ಮವಿಶ್ವಾಸ ಮೂಡಿಸಬೇಕು ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.