ಶುಕ್ರವಾರ, ಆಗಸ್ಟ್ 19, 2022
25 °C
ಬಿಜೆಪಿ ಬೆಂಬಲಿಗರಿಗೆ ಮತ ನೀಡಿ ಎಂದು ಮನವಿ ಮಾಡಿದ ಸಚಿವ ಚವ್ಹಾಣ್‌

ಸಚಿವ ಪ್ರಭು ಚವ್ಹಾಣ್‌ರಿಂದ ನೀತಿ ಸಂಹಿತೆ ಉಲ್ಲಂಘನೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಯತ್ನಿಸಬೇಕು’ ಎಂದು ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ಪಕ್ಷದ ಕಾರ್ಯಕರ್ತರಲ್ಲಿ ಕೋರಿದ್ದಾರೆ. ಈ ಮೂಲಕ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದಾರೆ.

‘ಪಂಚಾಯತ್ ರಾಜ್ ವ್ಯವಸ್ಥೆಯನ್ನು ಇನ್ನಷ್ಟು ಗಟ್ಟಿಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ ಮತ್ತು ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿಸುವ ಮೂಲಕ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಚುನಾವಣೆ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಕ್ಷೇತ್ರಗಳ ಪೈಕಿ ಎಲ್ಲಾ ಕಡೆಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇವರೆಲ್ಲರನ್ನೂ ಗೆಲ್ಲಿಸಲು ಹೆಚ್ಚಿನ ಶ್ರಮ ವಹಿಸಬೇಕು ಎಂದು ಕಾರ್ಯಕರ್ತರಲ್ಲಿ’ ಮನವಿ ಮಾಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಎಐಯುಟಿಸಿಐ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ, ‘ಜಿಲ್ಲಾಧಿಕಾ ರಿಯವರು ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ ಕೇಳಬೇಕು. ಇದು ಗಂಭೀರ ಲೋಪ. ಬಿಜೆಪಿಯವರು ತಮಗೆ ಬೇಕಾದಂತೆ ಎಲ್ಲ ವಿಷಯಗಳನ್ನು ರಾಜಕಾರಣ ಗೊಳಿಸುತ್ತಾರೆ. ಇದು ಅವರ ಸ್ವಭಾವವಾಗಿದೆ. ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರೇ ಇಂಥ ಮಾತು ಹೇಳುವುದು ಪಂಚಾಯತ್‌ ರಾಜ್‌ ವ್ಯವಸ್ಥೆಯ ಮೂಲ ಉದ್ದೇಶವನ್ನು ಹಾಳು ಮಾಡಿದಂತಾಗಿದೆ. ಜಿಲ್ಲಾಧಿಕಾರಿ ನಿರ್ಭಯವಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಜಿಲ್ಲೆಯಲ್ಲಿ ರಾಜರೋಷವಾಗಿ ಅಕ್ರಮ ಮದ್ಯ ಮಾರಾಟ, ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರ ಕಾರ್ಯಗಳು ನಡೆಯುತ್ತಿವೆ. ಅಕ್ರಮ ತಡೆಗಟ್ಟಲು ನೇಮಿಸಿರುವ ತಂಡಗಳು ಮೌನವಹಿಸಿವೆ. ಇದರಿಂದ ಚುನಾವಣೆ ನ್ಯಾಯ ಸಮ್ಮತವಾಗಿ ನಡೆಯಲು ಸಾಧ್ಯವೇ? ಎಂದು ಅವರು ಪ್ರಶ್ನಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.