ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಪೌಷ್ಟಿಕ ಆಹಾರ ಸೇವಿಸಲು ಸಲಹೆ

7

ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಪೌಷ್ಟಿಕ ಆಹಾರ ಸೇವಿಸಲು ಸಲಹೆ

Published:
Updated:
Deccan Herald

ಯಾದಗಿರಿ: ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳು ಪೌಷ್ಟಿಕ ಆಹಾರ ಸೇವಿಸಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಂಕರ ಬಿರಾದಾರ ಅವರು ಹೇಳಿದರು.

ನಗರದ ವಾರ್ಡ್ ಸಂಖ್ಯೆ 8ರ ಪಟೇಲ್ ವಾಡಿಯಲ್ಲಿ ಹಮ್ಮಿಕೊಂಡಿದ್ದ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಾಲು, ಹಣ್ಣು, ಮೊಟ್ಟೆ, ಹಸಿರು ತರಕಾರಿ ಹಾಗೂ ಮೊಳಕೆ ಕಾಳುಗಳನ್ನು ಸೇವಿಸುವುದರಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದರು.

ಮೂಕಾಂಬಿಕಾ ಶಾಲೆಯ ಶಿಕ್ಷಕಿ ಪೂರ್ಣಿಮಾ ಗಡ್ಡಿಮನಿ, ರಕ್ತಹೀನತೆ ತಡೆಗಟ್ಟಲು ಹಸಿರು ತರಕಾರಿ ಸೇವಿಸಬೇಕು ಎಂದು ತಾಯಂದಿರಿಗೆ ಸಲಹೆ ನೀಡಿದರು.

ಕಿರಿಯ ಆರೋಗ್ಯ ಸಹಾಯಕಿ ಸುನಿತಾ, ಅಪೌಷ್ಟಿಕತೆಯಿಂದ ಮೊರಾಸ್ಮಸ್, ಕ್ವಾಷಿಯಾರ್ಕರ್‌ನಂತಹ ರೋಗಗಳು ಬರುತ್ತವೆ. ಇದರಿಂದ ಮಗುವಿನ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುತ್ತದೆ. ಅಲ್ಲದೆ, ಕಲಿಕೆಯಲ್ಲಿ ಹಿಂದುಳಿಯುತ್ತಾರೆ. ಅದಕ್ಕಾಗಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂದು ಅವರು ತಿಳಿಸಿದರು.

ಆಶಾ ಕಾರ್ಯಕರ್ತೆ ಕೃಷ್ಣಮ್ಮ, ಅಂಗನವಾಡಿ ಕಾರ್ಯಕರ್ತೆಯರಾದ ವಿಜಯಲಕ್ಷ್ಮೀ ಮತ್ತು ಶಮಿನಾಬೇಗಂ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !