ಮಂಗಳವಾರ, ಸೆಪ್ಟೆಂಬರ್ 29, 2020
28 °C

ಪರಿಷ್ಕೃತ ಮೊತ್ತಕ್ಕೆ ಸಂಪುಟದ ಅನುಮೋದನೆ: ಹರ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಯಲ್ಲಿ ನೂತನವಾಗಿ ಆರಂಭವಾಗಲಿರುವ 'ವೈದ್ಯಕೀಯ ವಿಜ್ಞಾನಗಳ ಸಂಸ್ಥೆ' ಮತ್ತಷ್ಟು ಸುಸಜ್ಜಿತವಾಗಿ ಕಾರ್ಯ ನಿವಹಣೆಗೆ ಪರಿಷ್ಕೃತ ₹309 ಕೋಟಿ ಅನುಮೋದನೆ ನೀಡಲಾಗಿದ್ದು, ಸಂತಸ ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ನಿಯಮಗಳನ್ವಯ ಪ್ರತಿ 1,000 ಜನಸಂಖ್ಯೆಗೆ ಒಬ್ಬ ವೈದ್ಯರು ಇರಬೇಕಾಗಿದ್ದು, ಸದ್ಯ ರಾಜ್ಯದಲ್ಲಿ 13,556 ಜನಸಂಖ್ಯೆಗೆ ಒಬ್ಬ ವೈದ್ಯರು ಇದ್ದಾರೆ. ಈ ಅಸಮತೋಲನವನ್ನು ಸರಿಪಡಿಸಲು ಹಾಗೂ ರಾಜ್ಯದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಲು ಸರ್ಕಾರ ವೈದ್ಯಕೀಯ ಕಾಲೇಜು ಇರದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ತರಲು ನಿರ್ಧರಿಸಿದ್ದು, ಸಂತೋಷದ ವಿಷಯವಾಗಿದೆ ಎಂದಿದ್ದಾರೆ.

ಮುದ್ನಾಳ ಗ್ರಾಮದಲ್ಲಿ ಸ್ವಾಯತ್ತ ಸಂಸ್ಥೆಯ ಸ್ಥಾನಮಾನದೊಂದಿಗೆ 15 ಒ ಸೀಟುಗಳ ಪ್ರವೇಶವುಳ್ಳ ’ವೈದ್ಯಕೀಯ ವಿಜ್ಞಾನಗಳ ಸಂಸ್ಥೆ’ಎಂಬ ಹೆಸರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭವಾಗಲಿದ್ದು, ಇದರಲ್ಲಿ ಬಾಲಕ ಮತ್ತು ಬಾಲಕಿಯರ ವಸತಿ ನಿಲಯ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ವಸತಿ ನಿಲಯಗಳ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಸದ್ಯ ₹281 ಕೋಟಿಯಲ್ಲಿ ನಡೆಯುತ್ತಿದ್ದು, ಅದನ್ನು ₹309 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಮುಖ್ಯಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಉಪಮುಖ್ಯಮಂತ್ರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.