ಭಾನುವಾರ, ಜೂನ್ 20, 2021
25 °C
‘ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಿ’

ಮತದಾರರ ಪಟ್ಟಿ: ಹೆಸರು ಸೇರ್ಪಡೆಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ಅರ್ಹತಾ ದಿನಾಂಕ ಜನವರಿ 1, 2021 ರಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ತೆಗೆದು ಹಾಕುವುದು ಹಾಗೂ ವರ್ಗಾವಣೆಗೆ ಚುನಾವಣಾ ಆಯೋಗವು ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ತಿಳಿಸಿದ್ದಾರೆ.

ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅಂಗವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ಮತದಾರರು ತಮ್ಮ ಹೆಸರು ನೋಂದಾಯಿಸಲು ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಅವರು ಸ್ಥಳಾಂತರ ಹೊಂದಿದ್ದಲ್ಲಿ, ಮೃತಪಟ್ಟಿದ್ದರೆ, ಹೆಸರು ಪುನಾರಾವರ್ತನೆಯಾಗಿದ್ದರೆ ಅವರು ಹೆಸರನ್ನು ತೆಗೆದು ಹಾಕಲು, ನಮೂದಿಗಳ ತಿದ್ದುಪಡಿ ಹಾಗೂ ವರ್ಗಾವಣೆಗಾಗಿ ಅಕ್ಟೋಬರ್ 31 ರವರಗೆ ಕಾಲಾವಕಾಶ ನೀಡಲಾಗಿದ್ದು, ಈ ಸಮಯಾವಕಾಶವನ್ನು ಎಲ್ಲ ರಾಜಕೀಯ ಪಕ್ಷದವರು ಹಾಗೂ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಆನ್‍ಲೈನ್ ಮೊಬೈಲ್ ಅಪ್ಲಿಕೇಶನ್, www.nvsp.in ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ www.voterreg.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು www.ceo.karnataka.kar.nic.in ವೆಬ್‍ಸೈಟ್ ಭೇಟಿ ನೀಡಿ ಪರಿಶೀಲಿಸಿಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.