ಯಾದಗಿರಿ: ‘ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಹಿನ್ನೆಲೆಯಲ್ಲಿ ಅರ್ಹತಾ ದಿನಾಂಕ ನವೆಂಬರ್ 1ಕ್ಕೆ ಅನ್ವಯ ಆಗುವಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆದಿದೆ. ಅರ್ಹ ಮತದಾರರ ನೋಂದಣಿ ಕಾರ್ಯ ಇನ್ನಷ್ಟು ಚುರುಕುಗೊಳಿಸಬೇಕು’ ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರೂ ಆಗಿರುವ ಕ್ಷೇತ್ರದ ಚುನಾವಣಾಧಿಕಾರಿ ಜಹೀರಾ ನಸೀಮ್ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಾದ್ಯಂತ 1,961ಕ್ಕೂ ಹೆಚ್ಚು ಮತದಾರರಿದ್ದಾರೆ. ಈಗಾಗಲೇ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ ಆರಂಭಿಸಲಾಗಿದೆ. ನವೆಂಬರ್ 3ರ ವರೆಗೆ ಅರ್ಹ ಪ್ರತಿ ಮತದಾರರನ್ನು ನೋಂದಣಿ ಮಾಡುವ ಕಾರ್ಯ ಮಾಡಬೇಕು. ಅಭಿಯಾನ ಮೇಲುಸ್ತುವಾರಿಯ ನೋಡಲ್ ಅಧಿಕಾರಿಗಳು ಹಾಗೂ ಸ್ವೀಪ್ ನೋಡಲ್ ಅಧಿಕಾರಿಗಳು ಹೆಚ್ಚಿನ ಮುತುವರ್ಜಿವಹಿಸಬೇಕು. ನವೆಂಬರ್ 6ರ ಒಳಗೆ ಪ್ರತಿ ಅರ್ಹ ಮತದಾರ ನೋಂದಣಿ ಆಗುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

‘ಅರ್ಹ ಮತದಾರರು ನಿರಂತರ ಮೂರು ವರ್ಷ ಸೇವೆ ಹಾಗೂ ಪೂರ್ಣಾವಧಿ ಶಿಕ್ಷಕರಾಗಿರಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಬಯಸುವ ಪ್ರತಿಯೊಬ್ಬರು ಅರ್ಜಿ ನಮೂನೆ 19 ಅನ್ನು ಭರ್ತಿ ಮಾಡಿ ಶೈಕ್ಷಣಿಕ ಸಂಸ್ಥೆಗಳಲ್ಲಿ ನವಂಬರ್ 1ಕ್ಕೆ ಆರು ವರ್ಷಗಳ ಅವಧಿಯಲ್ಲಿ ಒಟ್ಟು ಕನಿಷ್ಠ ಮೂರು ವರ್ಷ ಬೋಧನಾ ವೃತ್ತಿಯಲ್ಲಿ ನಿರತರಾಗಿರಬೇಕು. ಈ ಬಗ್ಗೆ ಆಯಾ ಶೈಕ್ಷಣಿಕ ಸಂಸ್ಥೆಗಳಿಂದ ಅನುಬಂಧ- 2ರಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು. ಆಯಾ ಪ್ರಾಂಶುಪಾಲರಿಂದ ದೃಢೀಕರಣ ಪತ್ರ ಸಲ್ಲಿಸಬೇಕು’ ಎಂದು ಹೇಳಿದರು.

‘ನಿಯೋಜಿತ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ, ಪಿಯು ಕಾಲೇಜುಗಳು, ಮೆಡಿಕಲ್, ಪ್ಯಾರಾ ಮೆಡಿಕಲ್, ಎಂಜಿನಿಯರಿಂಗ್, ನರ್ಸಿಂಗ್, ಡೆಂಟಲ್ ಕಾಲೇಜು, ಪಾಲಿಟೆಕ್ನಿಕ್, ಪದವಿ ಕಾಲೇಜು, ಆಯುರ್ವೇದ ಕಾಲೇಜು ಸೇರಿ ಇತರೆ ಅರ್ಹ ಸಂಸ್ಥೆಗಳ ಅರ್ಹ ಮತದಾರರನ್ನು ತಪ್ಪದೇ ನೋಂದಾಯಿಸಬೇಕು’ ಎಂದರು.

‘ತಾಲ್ಲೂಕುವಾರು ನಿಯೋಜಿತರಾದ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಚುನಾವಣಾ ಸಿಬ್ಬಂದಿ ಮತದಾರರ ನೋಂದಣಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅರ್ಜಿಯಲ್ಲಿ ತಪ್ಪು ಘೋಷಣೆಗಳನ್ನು ಮಾಡುವವರಿಗೆ ಪ್ರಜಾಪ್ರಾತಿನಿಧ್ಯ ಅಧಿನಿಯಮ ಅನ್ವಯ ಶಿಕ್ಷೆಗೆ ಗುರಿ ಪಡಿಸಲಾಗುತ್ತದೆ. ಪಾರದರ್ಶಕ ಮತದಾರರ ಪಟ್ಟಿ ತಯಾರಿಕೆಗೆ ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು’ ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ವಿಜಯಕುಮಾರ್ ಮಡ್ಡೆ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.