ಯಾದಗಿರಿ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಡಾ.ಜೆ.ರವಿಶಂಕರ್ ಅವರು ತಾಲ್ಲೂಕಿನ ಅಲ್ಲಿಪುರ ಗ್ರಾಮದ ಮತದಾರರ ಮನೆಗಳಿಗೆ ಶುಕ್ರವಾರ ಭೇಟಿ ನೀಡಿ ಚರ್ಚಿಸಿದರು.

ಕರಡು ಮತದಾರರ ಪಟ್ಟಿಯಲ್ಲಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಿದ ಮತದಾರರು ಹಾಗೂ ಮತದಾರರ ಪಟ್ಟಿಯಲ್ಲಿನ ಆಯ್ದ ಮತದಾರರ ಮನೆಗಳಿಗೆ ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಣೆ ಪರಿಶೀಲಿಸಿದರು.

ನಂತರ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಂಗವಾಗಿ ಜಿಲ್ಲೆಯ ಕರಡು ಮತದಾರರ ಪಟ್ಟಿಯನ್ನು ಅರ್ಹತಾ ಜ.1ರಂದೇ ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಯ ಬಗ್ಗೆ ಯಾವುದೇ ದೂರು, ಆಕ್ಷೇಪಣೆಗಳಿದ್ದಲ್ಲಿ ಜನವರಿ 15ರ ವರೆಗೆ ಸಲ್ಲಿಸಬಹುದು. ಈ ಅವಧಿಯಲ್ಲಿ ಅರ್ಹ ಮತದಾರರ ಹೆಸರು ಸೇರ್ಪಡೆ, ಸ್ಥಳಾಂತರ, ತಿದ್ದುಪಡಿ, ಹೆಸರು ತೆಗೆದು ಹಾಕಲು ಅವಕಾಶ ಇದೆ. ಇದಕ್ಕಾಗಿ ಸಾರ್ವಜನಿಕರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು.

ಜ.15ರವರೆಗೆ ಸ್ವೀಕರಿಸಿದ ಹಕ್ಕು ಮತ್ತು ಆಕ್ಷೇಪಣೆಯ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ, ಜನವರಿ 27ರಂದು ಕಾಲೋಚಿತಗೊಳಿಸಲಾಗುವುದು. ನಂತರ ಹೆಚ್ಚುವರಿ ಪಟ್ಟಿಯನ್ನು ಫೆ.4ರಂದು ತಯಾರಿಸಿ, ಅಂತಿಮ ಮತದಾರರ ಪಟ್ಟಿಯನ್ನು ಫೆ. 7ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.