ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಮತದಾನ ಜಾಗೃತಿ ಕಾರ್ಯಕ್ರಮ

ಮತದಾನ ಪಟ್ಟಿಯಲ್ಲಿ ಹೆಸರು ನೋಂದಣಿ ಕುರಿತು ಜಾಗೃತಿ
Last Updated 9 ಫೆಬ್ರುವರಿ 2023, 6:26 IST
ಅಕ್ಷರ ಗಾತ್ರ

ಯಾದಗಿರಿ: ಕೇಂದ್ರ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಹೊಸ ಬಸ್ ನಿಲ್ದಾಣದಲ್ಲಿ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (sveep) ಕಾರ್ಯಕ್ರಮಕ್ಕೆ ಕೇಂದ್ರ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತ ಅಜಯ್ ಬಾಡೋ ಅವರು ಸಹಿ ಸಂಗ್ರಹಣಾ ಅಭಿಯಾನಕ್ಕೆ ಬುಧವಾರ ಸಹಿ (ಹಸ್ತಾಕ್ಷರ ನೀಡುವ) ಮಾಡುವ ಮೂಲಕ ಚಾಲನೆ ನೀಡಿದರು.

ನಗರದ ಡಾನ್ ಬೋಸ್ಕೊ ಶಾಲೆಯ ಮಕ್ಕಳಿಂದ ಮತದಾನ ಜಾಗೃತಿ ಕುರಿತ ಹಾಡಿಗೆ ನೃತ್ಯ ಪ್ರದರ್ಶನ ಮತ್ತು ಸ್ವೀಪ್ ಚಟುವಟಿಕೆಗಳಡಿ ಮತದಾನ ಮಾಡುವುದು, ಮತದಾನ ಪಟ್ಟಿಯಲ್ಲಿ ಹೆಸರು ನೋಂದಣಿ ಕುರಿತು ಕಲಾ ತಂಡದಿಂದ ಮತದಾನ ಜಾಗೃತಿ ಹಾಡು, ಬೀದಿನಾಟಕ ಪ್ರಸ್ತುತ ಪಡಿಸುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಪ್ರಮುಖ ಸ್ಥಳಗಳಲ್ಲಿ ಹಾಡು, ನೃತ್ಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮತದಾನದ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡುತ್ತಿದ್ದು, ಮತದಾನ ಹೆಚ್ಚಾದಲ್ಲಿ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಬಹುದು ಎಂಬ ಲೆಕ್ಕಾಚಾರ ಹೊಂದಿರುವ ಚುನಾವಣಾ ಆಯೋಗವು ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸಾಕಷ್ಟು ಶ್ರಮ ವಹಿಸುತ್ತಿದೆ ಎಂದು ಅಧಿಕಾರಿಗಳು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ, ಕರ್ನಾಟಕ ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ರಾಜೇಂದ್ರ ಚೋಳನ್, ಕರ್ನಾಟಕ ಜಂಟಿ ಮುಖ್ಯ ಚುನಾವಣಾ ಅಧಿಕಾರಿ ರಾಘವೇಂದ್ರ ಆಚಾರ್, ಜಿಲ್ಲಾ ಚುನಾವಣಾ
ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಮರೇಶ ಆರ್ ನಾಯ್ಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ವೆಂಕಟೇಶ ಚಟ್ನಳ್ಳಿ, ಡಿಡಿಪಿಐ ಶಾಂತಗೌಡ ಪಾಟೀಲ, ವಿಭಾಗೀಯ ಸಾರಿಗೆ ಅಧಿಕಾರಿ ರಮೇಶ್ ಪಾಟೀಲ, ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಭೈ, ಜಿಲ್ಲಾ ಎನ್‌ಆರ್‌ಡಿಎಂಎಸ್ ಕೇಂದ್ರದ ಅಧಿಕಾರಿ ಸಿದ್ದರೆಡ್ಡಿ, ಶಿಕ್ಷಣಾಧಿಕಾರಿ ಬಸನಗೌಡ ಆಲ್ದಾಳ ಸೇರಿದಂತೆ ವಿವಿಧ ಶಾಲಾ–ಕಾಲೇಜು ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT