ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ

Published 29 ಏಪ್ರಿಲ್ 2024, 4:36 IST
Last Updated 29 ಏಪ್ರಿಲ್ 2024, 4:36 IST
ಅಕ್ಷರ ಗಾತ್ರ

ಸುರಪುರ: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿ ಮತವೂ ಅತ್ಯಮೂಲ್ಯವಾಗಿದ್ದು, ಸಂವಿಧಾನ ಬದ್ಧವಾಗಿ ಲಭಿಸಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬರು ತಪ್ಪದೇ ಚಲಾಯಿಸಬೇಕು’ ಎಂದು ಚುನಾವಣಾಧಿಕಾರಿ ಕಾವ್ಯರಾಣಿ ತಿಳಿಸಿದರು.

ನಗರಸಭೆ ಕಚೇರಿಯ ಮತಗಟ್ಟೆಯಲ್ಲಿ ರಾಯಚೂರು ಲೋಕಸಭಾ ಮತ್ತು ಸುರಪುರ ಉಪ ಚುನಾವಣೆ ನಿಮಿತ್ತ ತಾಲ್ಲೂಕು ಸ್ವೀಪ್ ಸಮಿತಿ ಭಾನುವಾರ ಹಮ್ಮಿಕೊಂಡಿದ್ದ ‘ನಮ್ಮ ನಡೆ, ಮತಗಟ್ಟೆ ಕಡೆ’ ಜಾಗೃತಿ ಹಾಗೂ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಮತದಾನದಲ್ಲಿ ಭಾಗವಹಿಸುವುದು ಎಲ್ಲ ಮತದಾರರ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಪ್ರತಿ ಮತದಾರನು ತನ್ನ ಮತದ ಮೌಲ್ಯವನ್ನು ಅರಿತು ಪ್ರಜಾಪ್ರಭುತ್ವದ ಈ ಪವಿತ್ರ ಹಬ್ಬದಲ್ಲಿ ಪಾಲ್ಗೊಳ್ಳುವ ಮೂಲಕ ಸದೃಢ ಹಾಗೂ ಬಲಿಷ್ಠ ದೇಶ ಕಟ್ಟುವಂತಾಗಲಿ ಎಂಬುದೇ ಚುನಾವಣಾ ಆಯೋಗದ ಆಶಯವಾಗಿದೆ’ ಎಂದರು.

‘ನಗರಸಭೆ ವ್ಯಾಪ್ತಿಯ 01-44 ಮತಗಟ್ಟೆಗಳಲ್ಲಿ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಮತಗಟ್ಟೆ ಅಧಿಕಾರಿಗಳ ನೇತೃತ್ವದಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಜಾಗೃತಿ ಅಭಿಯಾನ ಮತ್ತು ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮತಗಟ್ಟೆ ಮುಂದೆ ಚಿತ್ತಾಕರ್ಷಕ ರಂಗೋಲಿ ಬಿಡಿಸಿ ಮತದಾನದ ಜಾಗ್ರತಿ ಮೂಡಿಸಲಾಗಿದೆ’ ಎಂದು ಪೌರಾಯುಕ್ತ ಮಂಜುನಾಥ ಶಿಡ್ಲಘಟ್ಟ ತಿಳಿಸಿದರು.

‘ನಗರಸಭೆ ವ್ಯಾಪ್ತಿಯ 44 ಮತಗಟ್ಟೆ ಸೇರಿ ಕ್ಷೇತ್ರದ ವಿವಿಧ ಮತಗಟ್ಟೆಗಳಲ್ಲಿ ಏಕಕಾಲಕ್ಕೆ ಚುನಾವಣಾ ಪರ್ವ ದೇಶದ ಗರ್ವ ಎಂಬ ಘೋಷ ವಾಕ್ಯದ ಬಟ್ಟೆಯ ಧ್ವಜಾರೋಹಣ ನೇರವೇರಿಸಲಾಗಿದೆ. ಮೇ.7 ರವರೆಗೂ ಈ ಧ್ವಜಾರೋಹಣ ಇರುತ್ತದೆ’ ಎಂದು ಮಾಹಿತಿ ನೀಡಿದರು.

ಸ್ವೀಪ್ ಸಮಿತಿ ಅಧ್ಯಕ್ಷ ಮತ್ತು ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ, ನಗರಸಭೆಯ ಯಲ್ಲಪ್ಪ ನಾಯಕ ಡೊಣ್ಣಿಗೇರೆ, ಗುರುಸ್ವಾಮಿ ಹಿರೇಮಠ, ದುರ್ಗಪ್ಪ ನಾಯಕ, ಜೆಇ ಮಹೇಶ ಸೇರಿ ಮತಗಟ್ಟೆ ಅಧಿಕಾರಿಗಳು ಮತ್ತು ನಗರಸಭೆ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT