ವಡಗೇರಾ: ತಾಲ್ಲೂಕಿನ ವ್ಯಾಪ್ತಿಯಲ್ಲಿ ದಲ್ಲಾಳಿಗಳು ರೈತರಿಗೆ ಕಳಪೆ ಬೀಜ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ ಇದಕ್ಕೆ ಕಡಿವಾಣ ಹಾಕುವಂತೆ ಕರ್ನಾಟಕ ರಾಜ್ಯ ರೈತ ಸಂಘದ ವಡಗೇರಾ ತಾಲ್ಲೂಕ ಘಟಕದ ಅಧ್ಯಕ್ಷ ಮಲ್ಲಣ್ಣ ನಿಲಹಳ್ಳಿ ಒತ್ತಾಯಿಸಿದ್ದಾರೆ.

‘ಆಂಧ್ರ ಹಾಗೂ ತೆಲಂಗಾಣ ರಾಜ್ಯದ ರಸಗೊಬ್ಬರ ಮಾರಾಟ ಅಂಗಡಿಯ ಮಾಲೀಕರು ಕಳಪೆ ಬೀಜಗಳನ್ನು ಕರ್ನಾಟಕ ರಾಜ್ಯಕ್ಕೆ ಸರಬರಾಜು ಮಾಡುತ್ತಿದ್ದು, ಇದು ರಾಜ್ಯದ ರೈತರಿಗೆ ಗೊತ್ತಾಗದೆ ಇರುವುದರಿಂದ ರೈತರು ಮೋಸ ಹೋಗುತ್ತಿದ್ದಾರೆ. ಈ ಕುರಿತು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಗೊತ್ತಿದ್ದರು ಅವರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ’ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

‘ಕಳಪೆ ಬಿತ್ತನೆಯ ಬೀಜ ಹಾಗೂ ರಸಗೊಬ್ಬರವನ್ನು ಸರಬರಾಜು ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಉದಾಸಿನತೆಯನ್ನು ಅದಿಕಾರಿಗಳು ತೋರಿದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಮಾಡಲಾಗುವುದು’ ಎಂದು ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-30-1098626868

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.