ಭಾನುವಾರ, ಆಗಸ್ಟ್ 1, 2021
23 °C

ವಡಗೇರಾ ತಹಶೀಲ್ದಾರ್ ಕಚೇರಿ ಸೀಲ್‌ಡೌನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಡಗೇರಾ: ತಾಲ್ಲೂಕಿನ ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ ಧೃಡಪಟ್ಟಿರುವುದರಿಂದ ವಡಗೇರಾ ಪಟ್ಟಣದಲ್ಲಿ ತಹಶೀಲ್ದಾರ್‌ ಕಚೇರಿಯನ್ನು ಸೋಮವಾರ ಒಂದು ದಿನ ಸೀಲ್ ಡೌನ್ ಮಾಡಲಾಯಿತು.

ಈ ಗ್ರಾಮ ಲೆಕ್ಕಾಧಿಕಾರಿ ಕ್ವಾರಂಟೈನ್ ಕೇಂದ್ರದ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಅದ್ದರಿಂದ ಅವರ ಜೊತೆ ಸಂಪರ್ಕ ಹೊಂದಿದ ಎಲ್ಲಾ ಸಿಬ್ಬಂದಿಗೆ ಬುಧವಾರ ಪರೀಕ್ಷೆ ಮಾಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.

ಕಚೇರಿಯನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಸಾರ್ವಜನಿಕರು ಭಯ ಪಡುವುದು ಬೇಡ, ಬದಲಾಗಿ ಜಾಗೃತರಾಗಿರಬೇಕು. ಮಾಸ್ಕ್ ಮತ್ತು ಅಂತರ ಕಾಪಾಡಿಕೊಂಡು ತಮ್ಮ ಕೆಲಸಗಳನ್ನು ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಸುರೇಶ ಅಂಕಲಗಿ ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು