ಸೋಮವಾರ, ಜೂನ್ 21, 2021
28 °C

ವಾಡಿ-ಗದಗ ರೈಲ್ವೆ ಯೋಜನೆ ಹೆಚ್ಚುವರಿ ಜಮೀನಿಗೆ ಬೆಲೆ ನಿಗದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ವಾಡಿ-ಗದಗ ರೈಲ್ವೆ ಯೋಜನೆಗಾಗಿ ಸುರಪುರ ಹಾಗೂ ಶಹಾಪುರ ತಾಲ್ಲೂಕಿನ ಹಳ್ಳಿಗಳಲ್ಲಿ ಸ್ವಾಧೀನಪಡಿಸಿದ ಹೆಚ್ಚುವರಿ ಜಮೀನಿಗೆ ಭೂಮಿ ಬೆಲೆಯನ್ನು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ನಿಗದಿಗೊಳಿಸಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ನಡೆದ ವಾಡಿ-ಗದಗ ರೈಲ್ವೆ ಯೋಜನೆಗಾಗಿ ಸ್ವಾಧೀನಪಡಿಸಿದ ಜಮೀನಿಗಳಿಗೆ ಭೂ ಬೆಲೆ ನಿರ್ಧರಿಸುವ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಸುರಪುರ ತಾಲ್ಲೂಕಿನ ವಿವಿಧ ಹಳ್ಳಿಗಳ 14.28 ಎಕರೆ ಹಾಗೂ ಶಹಾಪುರ ತಾಲ್ಲೂಕಿನ 8.35 ಎಕರೆ ಹೆಚ್ಚುವರಿ ಜಮೀನಿಗೆ ಬೆಲೆ ನಿಗದಿಗಿರುವ ಮಾರ್ಗಸೂಚಿ ಬಳಸಿಕೊಂಡು ಬೆಲೆ ನಿಗದಿಗೊಳಿಸಲಾಗಿದೆ ಎಂದು ತಿಳಿಸಿದರು.

ಬೆಲೆಗಳ ಬಗ್ಗೆ ಜಮೀನಿನ ಮಾಲೀಕರು (ರೈತರು) ಕೇಳಿದ ಪ್ರಶ್ನೆಗಳಿಗೆ ಜಿಲ್ಲಾಧಿಕಾರಿ ಸ್ವವಿಸ್ತಾರವಾಗಿ ವಿವರಿಸಿದರು.

ಇದೇ ಸಂದರ್ಭದಲ್ಲಿ ಭೂಸ್ವಾಧೀನ ಅಧಿಕಾರಿ ಶರಣಪ್ಪ, ರೈಲ್ವೆ ಅಧಿಕಾರಿಗಳು ಸೇರಿದಂತೆ ರೈತರು ಶಹಾಪುರ ಮತ್ತು ಸುರಪುರ ತಾಲ್ಲೂಕಿನ ಅಧಿಕಾರಿಗಳಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು