ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಣಸಿನಕಾಯಿ ಬೆಳೆಗಾಗಿ 2.75 ಟಿಎಂಸಿ ಕಾಲುವೆಗೆ ನೀರು ಹರಿಸಲು ನಿರ್ಧಾರ: ಶರಣಬಸಪ್ಪ

Published 7 ಜನವರಿ 2024, 7:07 IST
Last Updated 7 ಜನವರಿ 2024, 7:07 IST
ಅಕ್ಷರ ಗಾತ್ರ

ಶಹಾಪುರ (ಯಾದಗಿರಿ): ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆ ಸಂರಕ್ಷಣೆಗೆ ಕೂಡಲೇ ಕಾಲುವೆ ಮೂಲಕ 2.75 ಟಿಎಂಸಿ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಶರಣಬಸಪ್ಪ ದರ್ಶನಾಪುರ ಮಾಹಿತಿ ನೀಡಿದ್ದಾರೆ.

ಶನಿವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಸಚಿವರ, ಶಾಸಕರ, ವಿಧಾನಪರಿಷತ್ ಸದಸ್ಯರ, ಜಿಲ್ಲಾಧಿಕಾರಿ, ನೀರಾವರಿ ಅಧಿಕಾರಿ ಹಾಗೂ ರೈತ ಮುಖಂಡರ ಸಭೆ ನಡೆಸಿದರು. ಬೇಸಿಗೆಯಲ್ಲಿ ಕುಡಿಯುವ ನೀರಿನ ಪ್ರಮಾಣವನ್ನು ಕಾಯ್ದಿರಿಸಿ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆ ಸಂರಕ್ಷಿಸಲು ಕೂಡಲೇ 2.75 ಟಿಎಂಸಿ ಯಷ್ಟು ನೀರು ಹರಿಸಲು ಸರ್ಕಾರ ತೀರ್ಮಾನ ಕೈಗೊಂಡು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಲ್ಲೂಕಿನ ಭೀಮರಾಯನಗುಡಿ ಕೆಬಿಜೆಎನ್‌ಎಲ್ ನಿಗಮದ ಆಡಳಿತ ಕಚೇರಿಯ ಮುಂದೆ 20 ದಿನಗಳಿಂದ ಮೆಣಸಿನಕಾಯಿ ಬೆಳೆ ಬೆಳೆದ ರೈತರು ಧರಣಿ ನಡೆಸಿದ್ದರು. ರೈತರ ಹಿತದೃಷ್ಟಿಯಿಂದ ಕಾಲುವೆಗೆ ನೀರು ಹರಿಸಲು ಜಲಸಂಪನ್ಮೂಲ ಸಚಿವರಿಗೆ ಒತ್ತಡ ಹೇರಲಾಗಿತ್ತು. ಸರ್ಕಾರ ರೈತರ ಮನವಿಗೆ ಸ್ಪಂದಿಸಿದಕ್ಕೆ ರಾಜ್ಯ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ರೈತರ ಪರವಾಗಿ ಧನ್ಯವಾದ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT