ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾರಾಯಣಪುರ ಕಾಲುವೆಗೆ ನೀರು ಹರಿಸಲು ಆಗ್ರಹ

ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಗೆ ಅನುಕೂಲ
Last Updated 14 ಮೇ 2021, 19:30 IST
ಅಕ್ಷರ ಗಾತ್ರ

ಶಹಾಪುರ: ಬೇಸಿಗೆ ಕಾಲದ ಮುಕ್ತಾಯದ ಹಂತದಲ್ಲಿರುವಾಗ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹಳ್ಳ, ಹೊಂಡಗಳಲ್ಲಿ ನೀರು ಬರಿದಾಗಿದೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಯ (ಎನ್ಎನ್‌ಬಿಸಿ) ಮೂಲಕ ನೀರು ಹರಿಸಬೇಕು ಎಂದು ಕೃಷ್ಣಾ ಭಾಗ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಕೃಷ್ಣಾ ಅಚ್ಚುಕಟ್ಟು ಪ್ರದೇಶ ಭೂಮಿ ಉಳಿಸಿ ಹೋರಾಟ ಸಮಿತಿ ಸಂಚಾಲಕ ಅಶೋಕ ಮಲ್ಲಾಬಾದಿ ಮನವಿ ಮಾಡಿದ್ದಾರೆ.

ಮಾರ್ಚ್ ತಿಂಗಳ ಸಂದರ್ಭದಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಕಾಲುವೆಗೆ ನೀರು ಹರಿಸಲಾಗುವುದು. ಕುಡಿಯುವ ನೀರಿಗಾಗಿ ನಾರಾಯಣಪುರ ಜಲಾಶಯದಲ್ಲಿ ಸಂಗ್ರಹಿಸಿಡಲಾಗಿದೆ ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ತಿಳಿಸಿದ್ದರು. ಅದರಂತೆ ಈಗ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಉಂಟಾಗಿದೆ ನೀರು ಹರಿಸಿ ಎಂದು ಅವರು ಒತ್ತಾಯಿಸಿದ್ದಾರೆ.

ಕಾಲುವೆಗೆ ನೀರು ಹರಿಸುವುದರಿಂದ ಕೆರೆ, ಹಳ್ಳ, ಹೊಂಡಗಳಿಗೆ ನೀರು ಬರುವುದರ ಜೊತೆಯಲ್ಲಿ ಅಂತರ್ಜಲಮಟ್ಟ ಹೆಚ್ಚಳವಾಗಿ ಬೊರವೆಲ್ ಗೂ ನೀರು ಬರುತ್ತದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದಿಲ್ಲ.ಅಲ್ಲದೆ ಶಹಾಪುರ ನಗರವು ಕಾಲುವೆ ನೀರಿನ ಮೇಲೆ ಅವಲಂಬಿತವಾಗಿದೆ. ಫಿಲ್ಟರ್ ಬೆಡ್ ಕೆರೆಯಲ್ಲಿ ನೀರು ಸಂಗ್ರಹಿಸಿ ನಗರದ ಜನತೆಗೆ ಸರಬರಾಜು ಮಾಡಲಾಗುತ್ತಿದೆ. ಈಗ ಸಂಗ್ರಹಿಸಿದ ನೀರು ತುಸು ಕಡಿಮೆಯಾಗಿದೆ. ಕಾಲುವೆಗೆ ನೀರು ಹರಿಸುವುದರಿಂದ ನಗರದ ಜನತೆಗೆ ಆತಂಕ ದೂರವಾಗಲಿದೆ ಎನ್ನುತ್ತಾರೆ ನಗರದ ನಿವಾಸಿ ರವಿ ಹಿರೇಮಠ.

ಅಲ್ಲದೆ ತಾಲ್ಲೂಕಿನ ಶೆಟ್ಟಿಕೇರಾ ಗ್ರಾಮದ ಬಳಿ ಮರಿಕುಂಟಾ ಕೆರೆಯ ನೀರು ಸದ್ಬಳಕೆ ಮಾಡಿಕೊಂಡು ತಾಲ್ಲೂಕಿನ ವನದುರ್ಗ, ಹೊಸಕೇರಾ, ಚೆನ್ನೂರ, ಶೆಟ್ಟಿಕೇರಾ ಗ್ರಾಮಕ್ಕೆ ನೀರು ಸರಬರಾಜು ಮಾಡಲು ಎಂಟು ವರ್ಷದ ಹಿಂದೆ ₹5.50ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ. ಅದರ ಬಗ್ಗೆ ತನಿಖೆಯಾಗಲಿ ಎಂದು ರೈತ ಮುಖಂಡ ಮಾನಪ್ಪ ಮನವಿ ಮಾಡಿದ್ದಾರೆ.

***

ಕಾಲುವೆಗೆ ನೀರು ಹರಿಸುವುದರಿಂದ ಹಳ್ಳ, ಹೊಂಡದಲ್ಲಿ ನೀರು ಸಂಗ್ರಹವಾಗಿ ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾಗದು. ನಗರದ ಜನತೆಗೆ ನೀರಿನ ಸಮಸ್ಯೆ ಬರದು. ನೀರು ಬಿಡುಗಡೆಗಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ

-ಶರಣಬಸಪ್ಪ ದರ್ಶನಾಪುರ, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT