ಯಾದಗಿರಿ | ನಾಳೆಯಿಂದ ನೀರಾವರಿಗಾಗಿ ಕಾಲುವೆ ಜಾಲಕ್ಕೆ ನೀರು
ಯಾದಗಿರಿ: 2020-21ನೇ ಸಾಲಿನ ಮುಂಗಾರು ಹಂಗಾಮಿನ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ನಿರ್ವಹಣೆ ಮತ್ತು ಪೋಷಣೆ ನಾರಾಯಣಪುರ ಅಡಿಯಲ್ಲಿ ಬರುವ ಅಧಿಸೂಚಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿಗಾಗಿ ಕಾಲುವೆ ಜಾಲಕ್ಕೆ ಜುಲೈ 21ರಿಂದ ನೀರು ಹರಿಸುವುದಾಗಿ ಕೃಷ್ಣಾ ಭಾಗ್ಯ ಜಲ ನಿಗಮದ ಪ್ರಕಟಣೆ ತಿಳಿಸಿದೆ.
ಜುಲೈ 13 ರಂದು ಜರುಗಿದ 2020-21ನೇ ಸಾಲಿನ ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯ ಕುರಿತು ಕಚೇರಿ ಟಿಪ್ಪಣಿಯ ಅನುಮೋದಿತ ಅಂಶಗಳಂತೆ ಅಧಿಸೂಚಿತ ಅಚ್ಚುಕಟ್ಟು ಪ್ರದೇಶಕ್ಕೆ ಕೃಷ್ಣಾ ಮೇಲ್ದಂಡೆ ಯೋಜನೆಯ ಮುಂಗಾರು ಹಂಗಾಮಿಗೆ ನೀರಾವರಿಗಾಗಿ ಕಾಲುವೆ ಜಾಲದಲ್ಲಿ ಜುಲೈ 21ರಿಂದ ಮಳೆ ಆಧರಿಸಿ ನೀರು ಹರಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾಲುವೆ ಜಾಲದ ಗೇಟ್ಗಳನ್ನು ಹಾನಿ ಮಾಡುವುದು, ಅನಧಿಕೃತವಾಗಿ ಎಸ್ಕೇಪ್ಗಳ ಮೂಲಕ ಹಳ್ಳಕ್ಕೆ ನೀರು ಹರಿಸುವುದು, ಸೈಪನ್ಗಳ ಮೂಲಕ ಮಣ್ಣಿನ ಏರಿಯಲ್ಲಿ ನೀರನ್ನು ಎತ್ತಿಕೊಳ್ಳುವುದು, ಕಾಲುವೆ ಜಾಲದಲ್ಲಿ ಪಂಪುಗಳ ಮೂಲಕ ನೀರು ಎತ್ತುವುದನ್ನು ನೀರಾವರಿ ಕಾಯ್ದೆಯಡಿ ನಿರ್ಬಂಧಿಸಲಾಗಿದೆ. ಈ ಪರಿಸ್ಥಿತಿ ಕಂಡುಬಂದರೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ರೈತರು ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚಿತ ಅಚ್ಚುಕಟ್ಟು ಪ್ರದೇಶದಲ್ಲಿ ಲಘು ನೀರಾವರಿ ಬೆಳೆಗಳನ್ನು ಮಾತ್ರ ಬೆಳೆಯಲು ವಿನಂತಿಸಲಾಗಿದೆ. ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸಲು ಹಾಗೂ ಈ ನಿಟ್ಟಿನಲ್ಲಿ ನಿಗಮ ನಿಯಮಿತದ ಅಧಿಕಾರಿಗಳಿಗೆ ಸಹಕಾರ ನೀಡಲು ಕೋರಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.