ವಡಗೇರಾ: ತಾಲ್ಲೂಕಿನ ವ್ಯಾಪ್ತಿಯ ಕಮಲಾನಾಯಕ ತಾಂಡಾದ ವಿನೋದ ರಾಮು ಜಾಧವ(14) ಈಜಾಡಲು ಹೋಗಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ವಿವರ: ಪಟ್ಟಣದ ತಹಶೀಲ್ದಾರ್ ಕಚೇರಿಯಿಂದ ಸ್ವಲ್ಪ ದೂರದಲ್ಲಿರುವ ಹೊಂಡಕ್ಕೆ ಕಂಠಿತಾಂಡಾದ ನಾಲ್ಕು ಹುಡುಗರು ಟ್ಯೂಬ್ಗಳ ಸಹಾಯದಿಂದ ಈಜಾಡಲು ಹೋಗಿದ್ದಾರೆ. ಅದರಲ್ಲಿ ವಿನೋದ ಎಂಬ ಬಾಲಕ ಕಾಲು ಜಾರಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಮೃತ ಬಾಲಕ ವಡಗೇರಾ ತಾಲ್ಲೂಕಿನ ಕಾಡಂಗೇರಾ(ಬಿ) ಗ್ರಾಮದ ಮೋರಾರ್ಜಿ ವಸತಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ಎಂದು ಕುಟುಂಬ ಮೂಲಗಳು ತಿಳಿಸಿವೆ

ಸ್ಥಳಕ್ಕೆ ವಡಗೇರಾ ಪೊಲೀಸ್ ಠಾಣೆಯ ಪಿಎಸ್ಐ ಮಹೇಬೂಬಅಲಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.