ಭಾನುವಾರ, ಜುಲೈ 25, 2021
28 °C

ಯಾರಗೋಳ: ನೇಣುಬಿಗಿದ ಸ್ಥಿತಿಯಲ್ಲಿ 22 ವರ್ಷದ ಯುವತಿ ಶವ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯರಗೋಳ (ಯಾದಗಿರಿ ಜಿಲ್ಲೆ): ಇಲ್ಲಿಗೆ ಸಮೀಪದ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿ ಶನಿವಾರ ಅನುಮಾನಸ್ಪದವಾಗಿ ಗಿಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.

ಕಳೆದ 5 ದಿನಗಳಿಂದ ಕಾಣೆಯಾಗಿದ್ದ ಮಹಿಳೆ ಮಂಜುಳಾ (22) ಎಂದು ಗುರುತಿಸಲಾಗಿದೆ. ತಿಂಗಳ ಹಿಂದೆ ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲ್ಲೂಕಿನ ಅವರಾದಿ (ಬಿ) ಗ್ರಾಮದ ಮಲ್ಲಿಕಾರ್ಜುನ ಎನ್ನುವ ವ್ಯಕ್ತಿಗೆ ವಿವಾಹ ಮಾಡಿಕೊಡಲಾಗಿತ್ತು. 

ವಾರದ ಹಿಂದೆ ಮಣ್ಣೆತ್ತಿನ ಅಮಾವಾಸ್ಯೆ ಹಬ್ಬಕ್ಕೆಂದು ತವರು ಮನೆಗೆ ಆಗಮಿಸಿದ್ದರು. ಶನಿವಾರ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಸ್ಥಳಕ್ಕೆ ಸಿಪಿಐ ಸೋಮಶೇಖರ್ ಕೆಂಚರೆಡ್ಡಿ, ಗ್ರಾಮೀಣ ಠಾಣೆ ಪಿಎಸ್ಐ ಸುರೇಶಕುಮಾರ ಚವಾಣ್‌, ಮಹಿಳಾ ಠಾಣೆಯ ಪಿಎಸ್ಐ ಶೀಲಾ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು