ಗುರುವಾರ , ಫೆಬ್ರವರಿ 27, 2020
19 °C

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಯಾದಗಿರಿ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸರ್ಕಾರಿ ಪದವಿ ಕಾಲೇಜು ಬಳಿ ಗುರುವಾರ ಸಂಭವಿಸಿದೆ.

ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಜಾಕನಪಲ್ಲಿ ಗ್ರಾಮದ ದೇವಿಂದ್ರಮ್ಮ (40) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ನಾಲ್ಕಾರು ವರ್ಷಗಳ ಹಿಂದೆ ಪತಿ ಸಿದ್ದಪ್ಪ ಸಾಲ ಮಾಡಿ ತೀರಿಕೊಂಡಿದ್ದರು. ಇದೇ ವಿಷಯವಾಗಿ ಮಾನಸಿಕವಾಗಿ ನೊಂದಿದ್ದ ದೇವಿಂದ್ರಮ್ಮ ಗುರುವಾರ ರೈಲಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

‌ಎರಡು ದಿನದ ಹಿಂದೆ ಮೈಲಾಪುರ ಮೈಲಾರಲಿಂಗೇಶ್ವರ ಜಾತ್ರೆಗೆ ಮಕ್ಕಳ ಸಮೇತ ಬಂದಿದ್ದರು. ಮೂಲತಃ ಯಾದಗಿರಿ ತಾಲ್ಲೂಕಿನ ಆರ್‌.ಹೊಸಳ್ಳಿ ಗ್ರಾಮ ತವರು ಮನೆ. ರಾಯಚೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು