ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಹಾಪುರ: ಗೋಡೆ ಕುಸಿದು ಮಹಿಳೆ ಸಾವು, ಇನ್ನಿಬ್ಬರಿಗೆ ಗಾಯ

Published : 1 ಸೆಪ್ಟೆಂಬರ್ 2024, 16:28 IST
Last Updated : 1 ಸೆಪ್ಟೆಂಬರ್ 2024, 16:28 IST
ಫಾಲೋ ಮಾಡಿ
Comments

ಶಹಾಪುರ: ತಾಲ್ಲೂಕಿನ ಹುರಸಗುಂಡಗಿ ಗ್ರಾಮದಲ್ಲಿ (ಹಳೆ ಗ್ರಾಮ) ಭಾನುವಾರ ಮನೆಯ ಮುಂದಿನ ಗೋಡೆ ಕುಸಿದು ಗೋಡೆಯ ಪಕ್ಕದಲ್ಲಿ ಕುಳಿತಿದ್ದ ಶಕಿನಾಬಿ ಮಹೆಬೂಬುಸಾಬ್ ಪಿಂಜಾರ (70) ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗದ ಮಧ್ಯದಲ್ಲಿ ಅಸುನೀಗಿದ್ದಾರೆ ಎಂದು ತಹಶೀಲ್ದಾರ ಉಮಾಕಾಂತ ಹಳ್ಳೆ ತಿಳಿಸಿದ್ದಾರೆ.

ಗ್ರಾಮದ ಮಲ್ಲಿಕಾರ್ಜುನ ಅವರ ಮನೆ ಮುಂಭಾಗದ ಕಟ್ಟೆ ಮೇಲೆ ಮಹಿಳೆಯರ ಜತೆ ಮಾತಾಡುತ್ತಾ ಶಕಿನಾಬಿ ಕುಳಿತಿದ್ದರು. ಆಗ ಗೋಡೆ ಕುಸಿದಿದೆ. ಇನ್ನೂ ಇಬ್ಬರು ಮಹಿಳೆಯರಿಗೆ ಸಣ್ಣಪುಟ್ಟ ಗಾಯವಾಗಿವೆ ಎಂದು ಗ್ರಾಮದ ಮುಖಂಡರು ಹೇಳಿದ್ದಾರೆ.

ಗ್ರಾಮದ ಬಳಿ ಭೀಮಾ ನದಿಗೆ ಸನ್ನತಿ ಬ್ರೀಜ್ ಕಂ ಬ್ಯಾರೇಜ್ ನಿರ್ಮಿಸಿದೆ. ಬ್ಯಾರೇಜಿನ ಹಿನ್ನೀರು ಸಂಗ್ರಹವಾಗುತ್ತಿರುವುದರಿಂದ ಹಲವು ವರ್ಷದ ಹಿಂದೆ ಗ್ರಾಮವನ್ನು ಬೇರೆಡೆ ಸ್ಥಳಾಂತರಿಸಲಾಗಿತ್ತು. ಆದರೆ, ಗ್ರಾಮಸ್ಥರಲ್ಲಿ ಕೆಲವರು ಹಳೆ ಮನೆಯಲ್ಲಿ ವಾಸವಾಗಿದ್ದಾರೆ. ಹಳೆ ಮನೆಯಾಗಿದ್ದರಿಂದ ಗೋಡೆ ಕುಸಿದು ಅನಾಹುತವಾಗಿದೆ. ಎರಡು ದಿನದಿಂದ ಜಿಟಿ ಜಿಟಿ ಮಳೆಯಾಗುತ್ತಿದ್ದರಿಂದ ಮನೆಯ ಗೋಡೆ ತೇವಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT