ಭಾನುವಾರ, ಸೆಪ್ಟೆಂಬರ್ 26, 2021
24 °C

ಯಾದಗಿರಿ: ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ- ವಿಡಿಯೊ ವೈರಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: 'ಜಿಲ್ಲೆಯ ಶಹಾಪುರ ನಗರ ಹೊರವಲಯದಲ್ಲಿ ನಡೆದಿದೆ ಎನ್ನಲಾದ ವಿಡಿಯೊದಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ನಡೆಸಿರುವ ಕುರಿತು ನಾಲ್ವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ.ವೇದಮೂರ್ತಿ ತಿಳಿಸಿದ್ದಾರೆ.

'ಕೃತ್ಯಕ್ಕೆ ಸಂಬಂಧಿಸಿದಂತೆ ಶಹಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು. ಈ ಬಗ್ಗೆ ತನಿಖೆ ನಡೆಯುತ್ತಿದೆ. ಮಹಿಳೆ ಯಾರೂ ಎಂದು ಪತ್ತೆಯಾಗಿಲ್ಲ. ಪತ್ತೆಯಾದರೆ ಇವರ ಕಡೆಯಿಂದ ದೂರು ಪಡೆಯಲಾಗುವುದು. ಇಲ್ಲದಿದ್ದರೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗುವುದು' ಎಂದರು.

ಅಧಿಕಾರಿಗಳ ಮೂರು ತಂಡ ರಚನೆ
'ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಮೂರು ತಂಡಗಳನ್ನು ರಚಿಸಲಾಗಿದೆ. ಘಟನೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ‌. ಶೀಘ್ರವೇ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು' ಎಂದು ತಿಳಿಸಿದ್ದಾರೆ.

ಏನಿದು ಘಟನೆ
ವಿಡಿಯೊದಲ್ಲಿ ಯುವಕರು ಮಹಿಳೆಯನ್ನು ನಗ್ನಗೊಳಿಸಿ ಥಳಿಸುತ್ತಿದ್ದಾರೆ. ಕಾಲಿಗೆ ಬೀಳುತ್ತೇನೆ ಅಣ್ಣ ಹೊಡೆಯಬೇಡಿ ಎಂದು ಮಹಿಳೆ ಅಂಗಲಾಚುತ್ತಿದ್ದಾರೆ.  ಇದು ಕಳೆದ 8-9 ತಿಂಗಳ ಹಿಂದೆ ನಡೆದಿದೆ ಎನ್ನಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು