ಸೋಮವಾರ, ಸೆಪ್ಟೆಂಬರ್ 28, 2020
25 °C

ಶಹಾಪುರ | ಕೋವಿಡ್‌ನಿಂದ ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಹಾಪುರ (ಯಾದಗಿರಿ ಜಿಲ್ಲೆ): ನಗರದ ಆಸರಾ ಮೊಹಲ್ಲಾದ 52 ವರ್ಷದ ಮಹಿಳೆ ಸೋಮವಾರ ಕೋವಿಡ್-19 ನಿಂದ ಮೃತಪಟ್ಟಿದ್ದಾರೆ.

'ಶಹಾಪುರ ನಗರ ಸರ್ಕಾರಿ  ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ' ಎಂದು ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ.ಮಲ್ಲಪ್ಪ ಕಣಜಿಕರ ತಿಳಿಸಿದ್ದಾರೆ.

'ಜ್ವರ ಬಂದರೂ ಆಸ್ಪತ್ರೆಗೆ ತೋರಿಸಿಕೊಂಡಿಲ್ಲ. ಹೆಚ್ಚಿನ ತೊಂದರೆ ಕಾಣಿಸಿಕೊಂಡಾಗ ಆಸ್ಪತ್ರೆಗೆ ಆಗಮಿಸಿದ್ದರು. 
ಆಸ್ಪತ್ರೆಯಲ್ಲಿ ಒಂದು ಗಂಟೆಕಾಲ ಚಿಕಿತ್ಸೆ ನೀಡಿದರೂ ಸ್ಪಂದಿಸಲಿಲ್ಲ' ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 

ಯಾದಗಿರಿ ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ನಿಂದ 8 ಜನ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.