ಯಾದಗಿರಿ: ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಮಸೂದೆಯ ಸೋಲನ್ನು ಪ್ರತಿಪಕ್ಷಗಳು ಸಂಭ್ರಮಿಸಿದ್ದು ಖಂಡನೀಯ. ದೇಶದ ಮಹಿಳೆಯರ ಬಗ್ಗೆ ಪ್ರತಿಪಕ್ಷಗಳಿಗೆ ಇರುವ ಕಾಳಜಿ ಮತ್ತು ಹುಸಿ ಗೌರವ ಬಯಲಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮುಂದಿನ 2029ರ ಚುನಾವಣೆಯಿಂದ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಮೂಲಕ ಸಮಾನ ಹಕ್ಕು ನೀಡಲು ಮುಂದಾಗಿತ್ತು. ಪ್ರತಿಪಕ್ಷಗಳು ಇದಕ್ಕೆ ಸೋಲಾಗುವಂತೆ ನೊಡಿಕೊಳ್ಳುವ ಮೂಲಕ ತಮ್ಮ ನಿಜಬಣ್ಣ ಬಯಲು ಮಾಡಿಕೊಂಡಿವೆ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಕೋಟಾ ಕುರಿತ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲು ಕಾಂಗ್ರೆಸ್, ಟಿಎಂಸಿ, ಡಿಎಂಕೆ ಮತ್ತು ಎಸ್ಪಿ ಅವಕಾಶ ನೀಡಲಿಲ್ಲ. ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಇಂತಹದ್ದು ಪದೆಪದೇ ಮಾಡಿವೆ. ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ಮನಸ್ಥಿತಿ ಮಹಿಳೆಯರ ಹಿತಾಸಕ್ತಿ, ದೇಶದ ಹಿತದ ಪರವಾಗಿಲ್ಲ ಎಂದು ದೂರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-30-1351016430

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.