ಬುಧವಾರ, ಮಾರ್ಚ್ 3, 2021
28 °C

ಯಾದಗಿರಿ: 62ಕ್ಕೂ ಹೆಚ್ಚು ಬಸ್‌ಗಳಲ್ಲಿ ಬಂದ ಕಾರ್ಮಿಕರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಗೆ ವಿವಿಧ ಕಡೆಯಿಂದ 62ಕ್ಕೂ ಹೆಚ್ಚು ಬಸ್‌ಗಳಲ್ಲಿ ಕಾರ್ಮಿಕರು ಬಂದರು. ಅವರನ್ನು ಜಿಲ್ಲಾ ಕ್ರೀಡಾಂಗಣ ಮತ್ತು ಆಯುಷ್‌ ಆಸ್ಪತ್ರೆಗಳಲ್ಲಿ ತಪಾಸಣೆಗೆ ಒಳಪಡಿಸಲಾಯಿತು. ಜ್ವರ ತಪಾಸಣೆ ಮಾಡಿದ ನಂತರ ಕೈಗೆ ಹೋಂ‌ ಕ್ವಾರಂಟೈನ್‌ ಮುದ್ರೆ ಹಾಕಲಾಯಿತು.

ಕಾರ್ಮಿಕರು ತಮ್ಮ ಊರಿಗೆ ತೆರಳಲು ಆಸ್ಪತ್ರೆಯಿಂದ ಬಸ್‌ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿತು. 

ಗುಳೆ ಹೋಗಿದ್ದ ಕಾರ್ಮಿಕರು ಮಾತ್ರವಲ್ಲದೆ ಎಲ್ಲ ವರ್ಗದ ಜನರು ಬಸ್‌ಗಳಲ್ಲಿ ಬರುವುದು ಕಂಡು ಬಂದಿತು. ವಿದ್ಯಾರ್ಥಿಗಳು, ಬೆಂಗಳೂರಿನಲ್ಲಿ ನೆಲೆ ಕಂಡವರು ಜಿಲ್ಲೆಗೆ ಮರಳಿ ಬಂದಿದ್ದಾರೆ.

ಹೆಚ್ಚಿನ ದರ: ತಪಾಸಣೆ ಕೇಂದ್ರಗಳಿಗೆ ಮಾತ್ರ ಬಸ್‌ ವ್ಯವಸ್ಥೆ ಇರುವುದರಿಂದ ಅಲ್ಲಿಂದ ತಮ್ಮ ಊರಿಗೆ ತೆರಳಲು ಕಾರ್ಮಿಕರು ಪರದಾಟ ನಡೆಸಿದರು. ಕೆಲವರು ಆಟೊ, ಟಂಟಂ ಇನ್ನಿತರ ಖಾಸಗಿ ವಾಹನಗಳಲ್ಲಿ ದುಬಾರಿ ಬೆಲೆ ತೆತ್ತು ಪ್ರಯಾಣ ಮಾಡಿದರು. ಸಮೀಪದಲ್ಲಿರುವ ಗ್ರಾಮಗಳಿಗೆ ಜಿಲ್ಲಾಡಳಿತ ಜೀಪ್‌ನ ವ್ಯವಸ್ಥೆ ಮಾಡಿತ್ತು.

ಶಾಸಕರ ಭೇಟಿ, ಮಾಸ್ಕ್‌ ವಿತರಣೆ: ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ಕೂಲಿ ಕಾರ್ಮಿಕರನ್ನು ಕ್ರೀಡಾಂಗಣದಲ್ಲಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಭೇಟಿ ನೀಡಿ ಅವರಿಗೆ ಮಾಸ್ಕ್ ವಿತರಿಸಿದರು. ಕಾರ್ಮಿಕರನ್ನು ತಪಾಸಣೆ ಮಾಡಿ ಅವರ ಸ್ವಗ್ರಾಮಕ್ಕೆ ಸುರಕ್ಷಿತವಾಗಿ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಮಾತನಾಡಿದ ಶಾಸಕ ಮುದ್ನಾಳ, ಮಂಗಳವಾರ ಸುಮಾರು 500ಕ್ಕೂ ಹೆಚ್ಚು ಬಸ್‌ಗಳ ಮೂಲಕ 2000 ಕಾರ್ಮಿಕರು ವಿವಿಧೆಡೆಯಿಂದ ಜಿಲ್ಲೆಗೆ ಆಗಮಿಸಲಿದ್ದಾರೆ. ಅವರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಕಾರ್ಮಿಕರು ಅಂತರ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಡಿವೈಎಸ್ಪಿ ಶರಣಪ್ಪ, ಕೋವಿಡ್‌ ನೋಡಲ್‌ ಅಧಿಕಾರಿ ರಘುವೀರಸಿಂಗ್ ಠಾಕೂರ್, ಸಹಾಯಕ ಆಯುಕ್ತ ಶಂಕರ ಸೋಮನಾಳ, ಬಿಜೆಪಿ ಮುಖಂಡರಾದ ಶರಣಗೌಡ ಬಾಡಿಯಾಳ, ಖಂಡಪ್ಪ ದಾಸನ್, ವಿಲಾಸ ಪಾಟೀಲ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು